ನವದೆಹಲಿ, ನ.19 (DaijiworldNews/HR): ರೈತ ವಿರೋಧಿ ಮೂರೂ ಕೃಷಿ ಕಾಯ್ದೆಗಳನ್ನು ಹಿಂಪಡೆಯುವ ಪ್ರಧಾನ ಮಂತ್ರಿಯವರ ಘೋಷಣೆಯು ಬದಲಾವಣೆ ಅಥವಾ ಹೃದಯದ ಬದಲಾವಣೆಯಿಂದ ಪ್ರೇರಿತವಾಗಿಲ್ಲ. ಇದು ಚುನಾವಣೆಯ ಭಯದಿಂದ ಆಗಿದೆ! ಎಂದು ಕಾಂಗ್ರೆಸ್ ಮುಖಂಡ ಪಿ. ಚಿದಂಬರಂ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, "ಪ್ರಜಾಸತ್ತಾತ್ಮಕ ಪ್ರತಿಭಟನೆಗಳಿಂದ ಏನನ್ನು ಸಾಧಿಸಲಾಗದ್ದನ್ನ ಮುಂಬರುವ ಚುನಾವಣೆಯ ಭಯದಿಂದ ಸಾಧಿಸಬಹುದು! ಮೂರು ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವ ಕುರಿತು ಪ್ರಧಾನ ಮಂತ್ರಿಯವರ ಘೋಷಣೆಯು ನೀತಿಯ ಬದಲಾವಣೆ ಅಥವಾ ಹೃದಯದ ಬದಲಾವಣೆಯಿಂದ ಪ್ರೇರಿತವಾಗಿಲ್ಲ. ಇದು ಚುನಾವಣೆಯ ಭಯದಿಂದ ಆಗಿದೆ! ಎಂದಿದ್ದಾರೆ.
ಇನ್ನು ವಕೀಲ ಪ್ರಶಾಂತ್ ಭೂಷಣ್ ಟ್ವೀಟ್ ಮಾಡಿ, "ಅಂತಿಮವಾಗಿ ರೈತರನ್ನು ಸಂಕಷ್ಟಕ್ಕೆ ದೂಡಿದ ಒಂದು ವರ್ಷದ ನಂತರ, 3 ಕೃಷಿ ಕಾನೂನುಗಳನ್ನು (ತನ್ನ ಆಪ್ತರಾದ ಅಂಬಾನಿ/ಅದಾನಿಗಳಿಗೆ ಕೃಷಿ ಕ್ಷೇತ್ರವನ್ನು ನೀಡಲು ವಿನ್ಯಾಸಗೊಳಿಸಲಾಗಿದ್ದ) ಋಣಾತ್ಮಕ ಚುನಾವಣಾ ಪರಿಣಾಮವನ್ನು ನೋಡಿದ ನಂತರ, ಅವುಗಳನ್ನು ಹಿಂಪಡೆಯುವುದಾಗಿ ಪ್ರಧಾನಿ ಘೋಷಿಸಿದ್ದಾರೆ" ಎಂದು ಹೇಳಿದ್ದಾರೆ.