ಚಿಕ್ಕಮಗಳೂರು, ನ.19 (DaijiworldNews/PY): "ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಪಟ್ಟಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಹಾಸ್ಯಾಸ್ಪದ ಹೇಳಿಕೆ ನೀಡಿದ್ದಾರೆ" ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ ಟಿ ರವಿ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಬಿಟ್ ಕಾಯಿನ್ ವಿಚಾರದಲ್ಲಿ ನಾನು ಆರೋಪ ಮಾಡಿದ್ದೇನೆ. ನೀವು ದಾಖಲೆಯನ್ನು ಬಿಡುಗಡೆ ಮಾಡಿ ಎಂದು ಸಿದ್ದರಾಮಯ್ಯ ಅವರು ಹಾಸ್ಯಾಸ್ಪದ ಹೇಳಿಕೆಯನ್ನು ನೀಡಿದ್ದಾರೆ. ಆರೋಪ ಮಾಡಿದವರು ದಾಖಲೆಯನ್ನು ಬಿಡುಗಡೆ ಮಾಡಬೇಕು" ಎಂದಿದ್ದಾರೆ.
"ಬಿಟ್ ಕಾಯಿನ್ನ ಹಗರಣದಲ್ಲಿ ಯಾರೇ ಭಾಗಿಯಾಗಿದ್ದರೂ ಕೂಡಾ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಯಾರನ್ನೂ ರಕ್ಷಿಸುವ ಪ್ರಶ್ನೇಯೇ ಇಲ್ಲ" ಎಂದು ಹೇಳಿದ್ದಾರೆ.
"ಬಿಟ್ ಕಾಯಿನ್ ಹಗರಣನ ಸಂಬಂಧ ತನಿಖೆ ನಿಷ್ಪಕ್ಷಪಾತವಾಗಿ ನಡೆಯಬೇಕು. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು. ಶ್ರೀಕಿ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ಸಂಬಂಧ ಮಾಹಿತಿ ಸಾಕ್ಷ್ಯ ಇದ್ದಲ್ಲಿ ತನಿಖಾಧಿಕಾರಿ, ನ್ಯಾಯಾಧೀಶರಿಗೆ ನೀಡಬೇಕು" ಎಂದು ತಿಳಿಸಿದ್ದಾರೆ.