ಬೆಂಗಳೂರು, ನ.19 (DaijiworldNews/HR): ಮೂರು ಕೃಷಿ ಮಸೂದೆಗಳನ್ನು ಹಿಂಪಡೆಯುವ ಪ್ರಧಾನಿ ನರೇಂದ್ರ ಮೋದಿಯವರ ನಿರ್ಧಾರವನ್ನು ಮಾಜಿ ಪ್ರಧಾನಿ ದೇವೇಗೌಡ ಅವರು ಸ್ವಾಗತಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, "ಮೂರೂ ಕೃಷಿ ಕಾಯ್ದೆಗಳನ್ನು ಹಿಂಪಡೆಯುವ ಪ್ರಧಾನಿ ನರೇಂದ್ರ ಮೋದಿಯವರ ನಿರ್ಧಾರವನ್ನು ನಾನು ಸ್ವಾಗತಿಸುತ್ತೇನೆ. ಈ ಕಾಯ್ದೆಗಳ ವಿರುದ್ಧ ಪ್ರಜಾಸತ್ತಾತ್ಮಕ ಹೋರಾಟ ರೂಪಿಸಿದ ರೈತ ಸಮೂಹಕ್ಕೆ ನನ್ನ ಸಲ್ಯೂಟ್" ಎಂದಿದ್ದಾರೆ.
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಟ್ವೀಟ್ ಮಾಡಿ, "ಮೂರೂ ಕೃಷಿ ಕಾಯ್ದೆಗಳು ರದ್ದು: ಪ್ರಧಾನಿ ನರೇಂದ್ರ ಮೋದಿ ಘೋಷಣೆ ಯಾವುದೇ ಒತ್ತಡಕ್ಕೂ ಮಣಿಯದೇ ಹೋರಾಟ ನಡೆಸಿದ ಪ್ರತಿಯೊಬ್ಬ ರೈತರಿಗೂ ನನ್ನ ಹೃತ್ಪೂರ್ವಕ ಅಭಿನಂದನೆಗಳು. ಬಿಜೆಪಿಯ ಕ್ರೂರತ್ವವನ್ನು ಮೆಟ್ಟಿನಿಂತು ಹೋರಾಟ ನಡೆಸಿದ್ದೀರಿ. ಇದು ನಿಮ್ಮ ವಿಜಯವಾಗಿದೆ" ಎಂದರು.
ಇನ್ನು ರಾಹುಲ್ ಗಾಂಧಿ ಟ್ವೀಟ್ ಮಾಡಿ, ಇದು ಅನ್ಯಾಯದ ವಿರುದ್ದದ ಜಯ. ಈ ಜಯಕ್ಕೆ ಅಭಿನಂದನೆಗಳು ಜೈ ಹಿಂದ್ ಎಂದು ಹೇಳಿದ್ದಾರೆ.