ಲಕ್ನೋ, ನ.20 (DaijiworldNews/PY): ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು, ಲಖಿಂಪುರ ಖೇರಿ ಹಿಂಸಾಚಾರದಲ್ಲಿ ಸಾವನ್ನಪ್ಪಿದ ರೈತರ ಕುಟುಂಬಕ್ಕೆ ನ್ಯಾಯ ನೀಡುವಂತೆ ಕೋರಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ರಾಜಕೀಯ ಒತ್ತಡಕ್ಕೆ ಒಳಗಾದ ಉತ್ತರಪ್ರದೇಶ ಸರ್ಕಾರ ಮೃತರ ಕುಟುಂಬಕ್ಕೆ ನೀಡಬೇಕಾದ ನ್ಯಾಯದ ನಿಗ್ರಹ ಮಾಡುತ್ತಿದೆ ಎಂದು ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿದ್ದೇನೆ" ಎಂದಿದ್ದಾರೆ.
"ಮೃತಪಟ್ಟ ರೈತರ ಕುಟುಂಬಕ್ಕೆ ನ್ಯಾಯ ಸಿಗಬೇಕಿದೆ. ಹಾಗಾಗಿ ಪ್ರಧಾನಿ ಮೋದಿ ಅವರು ಲಕ್ನೋದಲ್ಲಿ ನಡೆಯಲಿರುವ ಡಿಜಿಪಿ ಹಾಗೂ ಐಜಿ ಸಮ್ಮೇಳದನಲ್ಲಿ ಭಾಗವಹಿಸಬಾರದು ಎಂದು ಪತ್ರದಲ್ಲಿ ಬರೆದಿದ್ದೇನೆ" ಎಂದು ತಿಳಿಸಿದ್ದಾರೆ.
"ಪ್ರಧಾನಿ ಮೋದಿ ಅವರಿಗೆ ರೈತರ ಬಗ್ಗೆ ನಿಜವಾದ ಕಾಳಜಿ ಇದ್ದರೆ ಅವರು ಲಖಿಂಪುರ ಖೇರಿ ಪ್ರಕರಣದ ಆರೋಪಿಯ ತಂದೆ ಅಜಯ್ ಮಿಶ್ರಾ ಜೊತೆ ವೇದಿಕೆ ಹಂಚಿಕೊಳ್ಳಬಾರದು" ಎಂದಿದ್ದಾರೆ.
"ಲಖಿಂಪುರ ಖೇರಿ ಹಿಂಸಾಚಾರದಲ್ಲಿ ಮೃತಪಟ್ಟ ರೈತರ ಕುಟುಂಬಕ್ಕೆ ನ್ಯಾಯ ಸಿಗಬೇಕಿದೆ. ಕೇಂದ್ರ ಗೃಹ ಖಾತೆ ಸಚಿವರಾಗಿ ಅಮಿತ್ ಮಿಶ್ರಾ ಮುಂದುವರೆದೆ ರೈತರ ಕುಟುಂಬಗಳಿಗೆ ನ್ಯಾಯ ಸಿಗುವುದಿಲ್ಲ" ಎಂದು ತಿಳಿಸಿದ್ದಾರೆ.