ಕಲಬುರಗಿ, ನ.20 (DaijiworldNews/HR): ಬಿಟ್ಕಾಯಿನ್ ಪ್ರಕರಣದಲ್ಲಿ ಮುಖ್ಯಮಂತ್ರಿಯವರ ಸಂಬಂಧಿಕರು ಅಥವಾ ನನ್ನ ಸಂಬಂಧಿಕರು ಭಾಗಿಯಾಗಿದ್ದಾರೆ ಕಾಂಗ್ರೆಸ್ ಸುಳ್ಳು ವದಂತಿ ಹಬ್ಬಿಸುತ್ತಿದ್ದು, ಅವರ ಬಳಿ ಯಾವುದೇ ಸಾಕ್ಷಿ ಇದ್ದರೆ, ಅವರು ಸೂಕ್ತ ದಾಖಲೆಗಳೊಂದಿಗೆ ತಮ್ಮನ್ನು ಸಂಪರ್ಕಿಸಲಿ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಮುಂದಿನ ದಿನಗಳಲ್ಲಿ ಗುಜರಾತ್ ಮಾದರಿಯಲ್ಲಿ ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಅಥವಾ ಸಂಪುಟ ಪುನಾರಚನೆ ಸಾಧ್ಯತೆಯನ್ನು ತಳ್ಳಿಹಾಕಿರುವ ಅವರು, "ಸಚಿವ ಸಂಪುಟ ಪುನಾರಚನೆ ಆಗುವುದಿಲ್ಲ ಆದರೆ ಸಾಮಾಜಿಕ ನ್ಯಾಯ ಮತ್ತು ಪ್ರಾದೇಶಿಕ ಸಮತೋಲನಕ್ಕೆ ಆದ್ಯತೆ ನೀಡಿ ಸೂಕ್ತ ಸಮಯದಲ್ಲಿ ಮುಖ್ಯಮಂತ್ರಿಗಳು ತಮ್ಮ ಸಚಿವ ಸಂಪುಟವನ್ನು ವಿಸ್ತರಣೆ ಮಾಡಲಿದ್ದಾರೆ" ಎಂದರು.
ಇನ್ನು ನನ್ನ ಸಂಬಂಧಿಕರು ಎಂದಿಗೂ ಇಂತಹ ಪ್ರಕರಣಗಳಲ್ಲಿ ಭಾಗಿಯಾಗುವುದಿಲ್ಲ ಮತ್ತು ನಾನು ಯಾವುದೇ ಕೆಲಸಕ್ಕಾಗಿ ಅಧಿಕಾರಿಗಳ ಜೊತೆ ದೂರವಾಣಿಯಲ್ಲಿ ಮಾತನಾಡಿಲ್ಲ" ಎಂದಿದ್ದಾರೆ.
ಸಿದ್ದರಾಮಯ್ಯ ಮತ್ತು ಅವರ ಗೆಳೆಯರು ದಿವಂಗತ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಹೆಸರನ್ನು ಎಳೆದು ತರುತ್ತಿದ್ದು,, ಜೊತೆಗೆ ವೀರ್ ಸಾವರ್ಕರ್ ಅವರ ಹೆಸರನ್ನು ಕಾಂಗ್ರೆಸ್ ನವರು ಎಳೆದು ತಂದಿಲ್ಲವೇ, ಹೀಗಿರುವಾಗ ಅವರ ಮೃತ ಮಗ, ಹಗರಣದಲ್ಲಿ ಭಾಗಿಯಾಗಿರುವವರ ಜೊತೆ ಇರುವ ಫೋಟೋ ಹಾಕಿದ್ದರಲ್ಲಿ ತಪ್ಪೇನು ಎಂದು ಪ್ರಶ್ನಿಸಿದ್ದಾರೆ.