ಬಾಗಲಕೋಟೆ, ನ.20 (DaijiworldNews/PY): "ಕಾಯ್ದೆಗಳನ್ನು ಸುಲಭವಾಗಿ ಪಾಸ್ ಮಾಡಿಕೊಳ್ಳಲು ವಿಧಾನಪರಿಷತ್ನಲ್ಲಿ ಹೆಚ್ಚಿನ ಸ್ಥಾನ ಪಡೆಯುವ ಅವಶ್ಯಕತೆ ಇದೆ" ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.
ವಿಧಾನಪರಿಷತ್ ಚುನಾವಣೆ ಹಿನ್ನೆಲೆ ಶನಿವಾರ ಬಾಗಲಕೋಟೆಯಲ್ಲಿ ಬಿಜೆಪಿಯಿಂದ ಆಯೋಜಿಸಿದ್ದ ಜನಸ್ವರಾಜ್ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, "ಎಪಿಎಂಸಿ ಬಿಲ್, ರೈತರ ಬಿಲ್ನಂತಹ ಕಾಯ್ದೆಗಳನ್ನು ಪಾಸ್ ಪಾಸ್ ಮಾಡಿಕೊಳ್ಳುವ ನಿಟ್ಟನಲ್ಲಿ ವಿಧಾನಪರಿಷತ್ನಲ್ಲಿ ಹೆಚ್ಚಿನ ಸ್ಥಾನ ಪಡೆಯಬೇಕಿದೆ. ಹಾಗಾಗಿ ಬಿಜೆಪಿ ಅಭ್ಯರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಿಸಿ" ಎಂದು ಮನವಿ ಮಾಡಿದ್ದಾರೆ.
"ಇಂದು ಕಾಂಗ್ರೆಸ್ ಯಾರಿಗೂ ಬೇಡವಾದ ಪಕ್ಷವಾಗಿದೆ. ಕಾಂಗ್ರೆಸ್ನಲ್ಲಿ ಸಮರ್ಥ ನಾಯಕತ್ವವೂ ಇಲ್ಲ. ಕಾಂಗ್ರೆಸ್ ಮುಕ್ತ ಕರ್ನಾಟಕ ಮಾಡಲು 2023ರ ತನಕ ಕಾಯುವ ಅವಶ್ಯಕತೆ ಇಲ್ಲ. ಈ ಬಾರಿಯ ವಿಧಾನಪರಿಷತ್ ಚುನಾವಣೆಯಲ್ಲೇ ಕಾಂಗ್ರೆಸ್ನ ಬಂಡೆಯನ್ನು ಒಡೆದು ಹಾಕೋಣ" ಎಂದು ಹೇಳಿದ್ದಾರೆ.
"ರಾಜ್ಯದಲ್ಲಿ ಬಿಜೆಪಿ ಅಲೆ ಸ್ಪಷ್ಟವಾಗಿ ಕಾಣುತ್ತಿದ್ದು, ವಿಧಾನಪರಿಷತ್ನ 25 ಸ್ಥಾನಗಳಿಗೆ ನಡೆಯುವ ಚುನಾವಣೆಯಲ್ಲಿ 15 ಸ್ಥಾನಗಳನ್ನು ಗೆಲ್ಲಲಿದೆ" ಎಂದು ತಿಳಿಸಿದ್ದಾರೆ.