ಮೈಸೂರು, ನ 20 (DaijiworldNews/MS): ರಾಜ್ಯದಲ್ಲಿ ನಡೆಯಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಜಯ ತನ್ನದಾಗಿಸುವ ಮೂಲಕ ವಿಧಾನಪರಿಷತ್ನಲ್ಲಿಯೂ ಸಂಪೂರ್ಣ ಬಹುಮತವನ್ನು ಪಡೆಯಲಿದ್ದೇವೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪನವರು ವಿಶ್ವಾಸ ವ್ಯಕ್ತಪಡಿಸಿದರು.
ನಗರದಲ್ಲಿಂದು ನಡೆದ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಅವರು ಕಳೆದ ಬಾರಿ ರಾಜ್ಯದಲ್ಲಿ ನಮ್ಮ ಶಾಸಕರು ಅತಿ ಕಡಿಮೆ ಸಂಖ್ಯೆಯಲ್ಲಿದ್ದರು. ಆದರೆ ಈ ಬಾರಿ ಹಾಗಲ್ಲ ಈ ಬಾರಿ ಅತಿ ಹೆಚ್ಚು ಶಾಸಕರಿದ್ದಾರೆ. ಗ್ರಾ.ಪಂನಲ್ಲೂ ಕಡಿಮೆ ಸಂಖ್ಯೆಯಲ್ಲಿ ಸದಸ್ಯರಿದ್ದು ಈ ಬಾರಿ ಅವರ ಸಂಖ್ಯೆಯಲ್ಲೂ ಹೆಚ್ಚಳವಾಗಿದೆ. ಮತದಾರರು ಅತಿ ಹೆಚ್ಚು ಇದ್ದು ಬಿಜೆಪಿ ಸದಸ್ಯರು ಗೆಲ್ಲಲಿದ್ದಾರೆ ಎಂದರು.
ಪರಿಷತ್ಗೆ ಚುನಾವಣೆ ನಡೆಯುವ ಈ ವೇಳೆಯಲ್ಲಿ ಭಾರತೀಯ ಜನತಾ ಪಕ್ಷದ ನಾಲ್ಕು ತಂಡಗಳಲ್ಲಿ ಇಡೀ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಕೂಡ ಪ್ರವಾಸ ನಡೆಸಿದ್ದೇವೆ. ಈ ವೇಳೆ ಗ್ರಾಮೀಣ ಪ್ರದೇಶದಲ್ಲಿ ಕೇಂದ್ರ, ರಾಜ್ಯಗಳು ಮಾಡುತ್ತಿರುವ ಅಭಿವೃದ್ಧಿ ಕಾರ್ಯದ ಬಗ್ಗೆ ಗಮನ ಸೆಳೆಯುತ್ತಿದ್ದೇವೆ. ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ 15-16ಕ್ಕೂ ಹೆಚ್ಚು ಸ್ಥಾನ ಲಭಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.