ರಾಜಸ್ಥಾನ, ನ.20 (DaijiworldNews/HR): ಸಂಪುಟ ಪುನಾರಚನೆಗೆ ಮುಂಚಿತವಾಗಿ ರಾಜಸ್ಥಾನ ಮಂತ್ರಿಮಂಡಲದ ಎಲ್ಲಾ ಸಚಿವರು ಶನಿವಾರ ರಾಜೀನಾಮೆ ನೀಡಿದ್ದು, ನಾಳೆ ನಿಗದಿಯಾಗಿರುವ ಕಾಂಗ್ರೆಸ್ ಸಮಿತಿ (ಪಿಸಿಸಿ) ಸಭೆಗೂ ಮುನ್ನ ಈ ಬೆಳವಣಿಗೆ ನಡೆದಿದೆ.
ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ನೇತೃತ್ವದ ಸಂಪುಟ ಸಭೆಯು ಶನಿವಾರ ಜೈಪುರದಲ್ಲಿರುವ ಅವರ ನಿವಾಸದಲ್ಲಿ ನಡೆದಿದ್ದು, ಸಭೆಯ ಬಳಿಕ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಇನ್ನು ಶುಕ್ರವಾರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ ಗೋವಿಂದ್ ಸಿಂಗ್ ದೋಟಾಸ್ರಾ ಅವರು ಸಭೆಯ ಆರಂಭದಲ್ಲಿ ಪ್ರಸ್ತಾಪವನ್ನು ಮಂಡಿಸಿದ್ದು ಬಳಿಕ ಎಲ್ಲಾ ಸಚಿವರು ರಾಜೀನಾಮೆ ನೀಡಿದ್ದಾರೆ.