ಕೊಲ್ಕೊತ್ತಾ, ನ.21 (DaijiworldNews/HR): ಟಿಎಂಸಿ ಮುಖಂಡನ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿ ಪರಾರಿಗಿರುವ ಘಟನೆ ಪಶ್ಚಿಮ ಬಂಗಾಳದ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ.
ಸಾಂದರ್ಭಿಕ ಚಿತ್ರ
ಟಿಎಂಸಿ ಮುಖಂಡ ಮಹರಮ್ ಶೇಖ್ ಕೊಲೆಯಾದವರು.
ಮಹರಮ್ ಶೇಖ್ ಅವರು ಗಂಭೀರ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆದರೆ ಭಾನುವಾರ ಬೆಳಗಿನ ಜಾವ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ.
ಇನ್ನು ಮುಖ್ಯ ಆರೋಪಿ ತಲೆಮರೆಸಿಕೊಂಡಿದ್ದು, ಆತನ ಬಂಧನಕ್ಕೆ ಬಲೆ ಬೀಸಲಾಗಿದೆ. ಕೊಲೆ ಹಿಂದಿನ ಉದ್ದೇಶ ತಿಳಿಯಲು ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.