ಬೆಂಗಳೂರು, ನ.21 (DaijiworldNews/HR): ರಾಜ್ಯದಲ್ಲಿ ಅಕಾಲಿಕ ಮಳೆಯಿಂದ ಬಾರಿ ಹಾನಿ ಉಂಟಾಗಿದ್ದು, ಮಳೆ ಹಾನಿ ಪರಿಹಾರದ ಕುರಿತು ಇಂದು ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, "ಮಳೆ ಹಾನಿ ಬಗ್ಗೆ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಪರಿಹಾರ ನೀಡಲು ಸೂಚಿಸಲಾಗಿದ್ದು, ಒಳನಾಡು ಪ್ರದೇಶಗಳಲ್ಲಿ ಹೆಚ್ಚಿನ ಮಳೆಯಾಗಿದೆ. ಮಳೆಯಿಂದ ಬೆಳೆ ನಾಶ, ರಸ್ತೆ, ಸೇತುವೆ, ಮೂಲ ಸೌಕರ್ಯಗಳಿಗೆ ಹಾನಿಯಾಗಿದೆ. ಜುಲೈನಲ್ಲಿ ಮೂರು ಲಕ್ಷ ರೈತರಿಗೆ ಹಣ ಬಿಡುಗಡೆ ಮಾಡಲಾಗಿದ್ದು, ಡಿಬಿಟಿ ಮೂಲಕ ಹಣ ಜಮಾ ಮಾಡಲು ತಿಳಿಸಲಾಗಿದೆ" ಎಂದರು.
ಇನ್ನು ಜಿಲ್ಲೆಗಳಿಗೆ ಹೋಗಲು ಚುನಾವಣೆ ಆಯೋಗದ ಅನುಮತಿ ಕೇಳಲಾಗಿದ್ದು, ಆಯೋಗ ಒಪ್ಪಿದರೆ ಸಚಿವರು ಜಿಲ್ಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ ಎಂದಿದ್ದಾರೆ.
ಅಕಾಲಿಕ ಮಳೆಯಿಂದ ಅಪಾರ ಪ್ರಮಾಣದ ಬೆಳೆ ಹಾನಿ ಬಗ್ಗೆ ಆದಷ್ಟು ಬೇಗ ಪರಿಹಾರ ನೀಡುವ ಕಾರ್ಯ ಪ್ರಗತಿಯಲ್ಲಿದೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಅಧಿಕಾರಿಗಳೊಂದಿಗೆ ಚರ್ಚಿಸಿದ್ದು, ಈಗಾಗಲೇ ಎಲ್ಲ ಕಡೆ ಪ್ರಾಥಮಿಕ ಸಮೀಕ್ಷೆ ಆರಂಭಿಸಲಾಗಿದೆ.