ಪಠಾಣ್ಕೋಟ್, ನ.22 (DaijiworldNews/HR): ಪಂಜಾಬ್ನ ಪಠಾಣ್ಕೋಟ್ ಸೇನಾ ನೆಲೆಯ ಗೇಟಿನ ಹೊರಭಾಗದಲ್ಲಿ ಗ್ರೆನೇಡ್ ಸ್ಫೋಟಗೊಂಡಿದ್ದು, ಸ್ಥಳದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಭಾನುವಾರ ರಾತ್ರಿ ಸೇನಾ ನೆಲೆಯ ತ್ರಿವೇಣಿ ಗೇಟ್ ಹೊರಭಾಗದಲ್ಲಿ ಸ್ಫೋಟ ಸಂಭವಿಸಿದ್ದು, ಈ ವೇಳೆ ಯಾವುದೇ ಸಾವು, ನೋವು ಸಂಭವಿಸಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಇನ್ನು ಅಪರಿಚಿತ ವ್ಯಕ್ತಿಗಳು ದ್ವಿಚಕ್ರ ವಾಹನದಲ್ಲಿ ಬಂದು ಸೇನಾ ನೆಲೆಯ ಗೇಟ್ನತ್ತ ಗ್ರೆನೇಡ್ ಎಸೆದಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಪರಿಶೀಲಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.