ಮುಂಬೈ, ನ.22 (DaijiworldNews/HR): ಮುಂಬೈನ ಮಾಜಿ ಪೊಲೀಸ್ ಕಮಿಷನರ್ ಪರಮ್ ಬೀರ್ ಸಿಂಗ್ ಅವರಿಗೆ ಸುಪ್ರೀಂ ಕೋರ್ಟ್ ಬಂಧನದಿಂದ ರಕ್ಷಣೆ ನೀಡಿದ್ದು, ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಹಾಜರಾಗುವಂತೆ ಸೂಚಿಸಿದೆ.
ಸಾಂದರ್ಭಿಕ ಚಿತ್ರ
ಮಹಾರಾಷ್ಟ್ರ ಸರ್ಕಾರ ಮತ್ತು ಸಿಬಿಐಗೆ ನೋಟಿಸ್ ಜಾರಿಗೊಳಿಸಿರುವ ಸುಪ್ರೀಂ ಕೋರ್ಟ್ ಡಿಸೆಂಬರ್ 6 ಕ್ಕೆ ವಿಚಾರಣೆಯನ್ನು ಮುಂದೂಡಿದೆ.
ಪರಮ್ ಬೀರ್ ಸಿಂಗ್ ಮುಂದಿನ 48 ಗಂಟೆಗಳ ಒಳಗೆ ಸಿಬಿಐ ಮುಂದೆ ಹಾಜರಾಗಲು ಸಿದ್ಧ ಎಂದು ಸಿಂಗ್ ಅವರ ವಕೀಲರು ಸುಪ್ರೀಂ ಕೋರ್ಟ್ಗೆ ತಿಳಿಸಿದ ನಂತರ ಸುಪ್ರೀಂ ಕೋರ್ಟ್ ನಿರ್ದೇಶನ ಬಂದಿದೆ.
ಇನ್ನು ಸಿಂಗ್ ಅವರು ಭಾರತದಲ್ಲಿ ತುಂಬಾ ದಿನದಿಂದ ಇದ್ದಾರೆ ಮತ್ತು ತಲೆಮರೆಸಿಕೊಂಡಿಲ್ಲ ಮತ್ತು ಪೊಲೀಸರಿಂದ ಜೀವ ಬೆದರಿಕೆಯನ್ನು ಎದುರಿಸುತ್ತಿರುವ ಕಾರಣ ತಲೆಮರೆಸಿಕೊಂಡಿದ್ದಾರೆ' ಎಂದು ವಕೀಲರು ಹೇಳಿದ್ದು, ಸಿಂಗ್ ಅವರು ಎಲ್ಲಿದ್ದಾರೆಂದು ತಿಳಿಯುವವರೆಗೂ ಅವರು ಸಲ್ಲಿಸಿರುವ ಮೇಲ್ಮನವಿಯನ್ನು ಆಲಿಸುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಕಳೆದ ವಾರ ಹೇಳಿದ ನಂತರ ಬೀರ್ ಸಿಂಗ್ ಅವರ ವಕೀಲರು ಅರ್ಜಿ ಸಲ್ಲಿಸಿದ್ದಾರೆ.
ಸಿಂಗ್ ಕನಿಷ್ಠ ನಾಲ್ಕು ಸುಲಿಗೆ ಪ್ರಕರಣಗಳನ್ನು ಎದುರಿಸುತ್ತಿದ್ದು, ಇದುವರೆಗೆ ಅವರು ದೇಶದಿಂದ ಪಲಾಯನ ಮಾಡಿರಬಹುದು ಎಂದು ವರದಿಗಳು ಸೂಚಿಸಿವೆ.
ಪರಮ್ ಬೀರ್ ಸಿಂಗ್ ವಿರುದ್ಧ ಮಹಾರಾಷ್ಟ್ರ ಸರ್ಕಾರವು ಆರಂಭಿಸಿದ ಎರಡು ಪ್ರಾಥಮಿಕ ವಿಚಾರಣೆಗಳನ್ನು ಪ್ರಶ್ನಿಸಿ ತನ್ನ ಮನವಿಯನ್ನು ವಜಾಗೊಳಿಸಿದ ಹೈಕೋರ್ಟ್ನ ತೀರ್ಪಿನ ವಿರುದ್ಧ ಸಿಂಗ್ ಅವರು ಸುಪ್ರೀಂ ಕೋರ್ಟ್ ನ ಮೊರೆ ಹೋಗಿದ್ದರು .