ಚೆನ್ನೈ, ನ.22 (DaijiworldNews/PY): ಬಹುಭಾಷಾ ನಟ ಹಾಗೂ ರಾಜಕಾರಣಿ ಕಮಲ್ ಹಾಸನ್ ಅವರಿಗೆ ಕೊರೊನಾ ದೃಢಪಟ್ಟಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, "ಅಮೇರಿಕಾ ಪ್ರವಾಸದಿಂದ ಹಿಂತಿರುಗಿದ ನಂತರ ನನಗೆ ಸ್ವಲ್ಪ ಕೆಮ್ಮು ಕಾಣಿಸಿಕೊಂಡ ಕಾರಣ ಕೊರೊನಾ ಪರೀಕ್ಷೆಗೆ ಒಳಗಾಗಿದ್ದೆ. ಈಗ ಪರೀಕ್ಷೆ ವರದಿ ಬಂದಿದ್ದು, ನನಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ" ಎಂದು ತಿಳಿಸಿದ್ದಾರೆ.
"ಆಸ್ಪತ್ರೆಯನ್ನು ನನ್ನನ್ನು ನಾನು ಪ್ರತ್ಯೇಕಿಸಿಕೊಂಡಿದ್ದೇನೆ. ಕೊರೊನಾ ಸಾಂಕ್ರಾಮಿಕ ರೋಗ ಇನ್ನೂ ಮುಗಿದಿಲ್ಲ. ಎಲ್ಲರೂ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು" ಎಂದು ಮನವಿ ಮಾಡಿದ್ದಾರೆ.