ಮಡಿಕೇರಿ, ನ.22 (DaijiworldNews/HR): 'ರಾಷ್ಟ್ರದಲ್ಲಿಯೇ ಕಾಂಗ್ರೆಸ್ ಪಕ್ಷ ಮಾಯವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದ್ದಾರೆ.
ಜನಸ್ವರಾಜ್ ಸಮಾವೇಶ ಅಲ್ಲ, ಜನರ ಬರ್ಬಾದ್ ಯಾತ್ರೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಕಾಂಗ್ರೆಸ್ ಅನ್ನು ರಾಜ್ಯದಲ್ಲಿ ಬರ್ಬಾದ್ ಮಾಡುವ ಸಮಾವೇಶ ಇದು. ರಾಷ್ಟ್ರದಲ್ಲಿಯೇ ಕಾಂಗ್ರೆಸ್ ಪಕ್ಷ ಮಾಯವಾಗಿದೆ. ಕಾಂಗ್ರೆಸ್ ಅನ್ನು ಜನ ತಿರಸ್ಕಾರ ಮಾಡಿದ್ದಾರೆ. ಅದು ಪ್ರಾದೇಶಿಕ ಪಕ್ಷವಾಗಿದೆ. ರಾಜ್ಯ ಕಾಂಗ್ರೆಸ್ನಲ್ಲಿ ಎರಡು ಗುಂಪುಗಳಿವೆ. ಅದೂ ಯಾವಾಗ ಒಡೆದು ಹೋಗಲಿದೆಯೋ ತಿಳಿದಿಲ್ಲ" ಎಂದರು.
ಇನ್ನು "ಸಿದ್ದರಾಮಯ್ಯ ಅವರ ಸ್ವಾರ್ಥ ರಾಜಕಾರಣಕ್ಕೆ ಬೇಸತ್ತು ಅನೇಕ ನಾಯಕರು ಪಕ್ಷ ಬಿಡಲು ಸಿದ್ಧರಿದ್ದು, ಸಿದ್ದರಾಮಯ್ಯಗೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತರು, ಸಿ.ಎಂ ಸ್ಥಾನ ಕಳೆದುಕೊಂಡರೂ ಬುದ್ಧಿ ಬಂದಿಲ್ಲ" ಎಂದು ವಾಗ್ದಾಳಿ ನಡೆಸಿದ್ದಾರೆ.