ಕೊಲ್ಕತ್ತಾ, ನ. 22 (DaijiworldNews/SM): ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಅಸಮಾಧಾನ ಹೊರ ಹಾಕಿದ್ದು ಭಾರತದ ಗಡಿ ಭದ್ರತಾ ಪಡೆಯ (ಬಿಎಸ್ಎಫ್) ಅಧಿಕಾರ ವ್ಯಾಪ್ತಿಯನ್ನು ವಿಸ್ತರಿಸಲು ವಿರೋಧಿಸಿದ್ದಾರೆ. ಅಲ್ಲದೆ, ಈ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಚರ್ಚಿಸಲಿದ್ದಾರೆ.
ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ ದೆಹಲಿಗೆ ಹೊರಡುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದರು. "ನಮ್ಮನ್ನು ನಿಯಂತ್ರಿಸಲು ನಾನು ಅವರಿಗೆ(ಕೇಂದ್ರ) ಎಂದಿಗೂ ಅವಕಾಶ ನೀಡುವುದಿಲ್ಲ ಎಂದಿದ್ದಾರೆ. ಇದು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯ ವಿಷಯವಾಗಿದ್ದು, ನಮಗೆ ಬಿಎಸ್ಎಫ್ ಬಗ್ಗೆ ಅಪಾರ ಗೌರವವಿದೆ ಎಂದರು. ಆದರೆ, ನಮ್ಮ ಪ್ರದೇಶಗಳನ್ನು ನಿಯಂತ್ರಿಸಲು ಯಾರಿಗೂ ಅವಕಾಶ ನೀಡುವುದಿಲ್ಲ ಎಂದಿದ್ದಾರೆ.
ಈ ನಡುವೆ ಕೇಂದ್ರ ಸರಕಾರ ವಿರುದ್ಧ ಕಿಡಿ ಖಾರಿದ ಅವರು ಬಿಜೆಪಿ ತನ್ನ ಅಧಿಕಾರವನ್ನು ಸ್ಥಾಪಿಸಲು ಕೇಂದ್ರ ಏಜೆನ್ಸಿಗಳನ್ನು ಬಳಸುತ್ತಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.