ಬೆಂಗಳೂರು, ನ.23 (DaijiworldNews/HR): ರಾಜ್ಯದಲ್ಲಿ ಸುರಿದ ಮಳೆಯಿಂದಾಗಿ ಕೃಷಿ ಭೂಮಿ ಸೇರಿದಂತೆ ಅನೇಕ ಮನೆಗಳಿಗೆ ಹಾನಿಯಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಕರೆ ಮಾಡಿ ಮಳೆ ಹಾನಿಯ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಸಿಎಂ, ಅಕಾಲಿಕ ಮಳೆಯಿಂದ ರಾಜ್ಯದಲ್ಲಿ ಅಪಾರ ಪ್ರಮಾಣದ ಬಗ್ಗೆ ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕರೆ ಮಾಡಿ ಅಗತ್ಯ ನೆರವಿನ ಭರವಸೆ ನೀಡಿದ್ದಾರೆ" ಎಂದರು.
ಇನ್ನು "ಮನೆ, ಬೆಳೆ, ಜೀವ ಹಾನಿ, ಪ್ರವಾವ ಪರಿಸ್ಥಿತಿ ಮತ್ತು ಬೆಂಗಳೂರಿನ ಸ್ಥಿತಿಗತಿ ಬಗ್ಗೆ ಮಾಹಿತಿ ನೀಡಲಾಗಿದೆ" ಎಂದು ತಿಳಿಸಿದ್ದಾರೆ.
ಈ ಬಾರಿ ಸುರಿದ ಅಕಾಲಿಕ ಮಳೆಯಿಂದಾಗಿ ಅನೇಕ ಕೃಷಿ ಭೂಮಿಗಳು ನಾಶವಾಗಿದ್ದು, ಜೊತೆಗೆ ಮನೆಗಳಿಗೂ ಹಾನಿಯಾಗಿದೆ.