ತಮಿಳುನಾಡು, ನ.23 (DaijiworldNews/HR): ಮನೆಯೊಂದರಲ್ಲಿ ಸಿಲೆಂಡರ್ ಸ್ಫೋಟಗೊಂಡ ಪರಿಣಾಮ ಕಟ್ಟಡ ಕುಸಿದು ಇಬ್ಬರು ಸಾವನ್ನಪ್ಪಿರುವ ಘಟನೆ ತಮಿಳುನಾಡಿ ಸೇಲಂ ಜಿಲ್ಲೆಯ ಕರುಂಗಲ್ನಲ್ಲಿ ನಡೆದಿದೆ.
ಸಾಂದರ್ಭಿಕ ಚಿತ್ರ
ಘಟನೆಯಲ್ಲಿ ಮಹಿಳೆ ಸೇರಿದಂತೆ ಇಬ್ಬರು ಮೃತಪಟ್ಟಿದ್ದು, ಪಕ್ಕದ ಎರಡು ಮನೆಗಳು ಸಹ ಕುಸಿದಿದ್ದು, 12 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಇನ್ನು ಅಗ್ನಿಶಾಮಕ ಮತ್ತು ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಅವಶೇಷಗಳಡಿ ಸಿಲುಕಿದ್ದ 12 ಜನರನ್ನ ರಕ್ಷಿಸಿದ್ದು, ಅವರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಜಿಲ್ಲಾಧಿಕಾರಿ ಕರ್ಮೇಘಂ ಘಟನಾ ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆಯ ಮೇಲ್ವಿಚಾರಣೆ ವಹಿಸಿದ್ದಾರೆ.