ಬೆಂಗಳೂರು, ನ.23 (DaijiworldNews/HR): ಬಂಡಾಯ ಅಭ್ಯರ್ಥಿಗಳನ್ನು ಪಕ್ಷದಿಂದ ಉಚ್ಚಾನೆ ಮಾಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ. ಏನಿದರ ಅರ್ಥ? ಕಾರ್ಯಕರ್ತರು ಯಾವುದೇ ಕಾರಣಕ್ಕೂ ಧ್ವನಿ ಎತ್ತಬಾರದೆಂಬ ಸೂಚನೆಯೋ ಅಥವಾ ಸಿದ್ದರಾಮಯ್ಯ ಬಣಕ್ಕೆ ನೀಡುತ್ತಿರುವ ಎಚ್ಚರಿಕೆಯೋ? ಎಂದು ಬಿಜೆಪಿ ಪ್ರಶ್ನಿಸಿದೆ.
ಸಾಂದರ್ಭಿಕ ಚಿತ್ರ
ಈ ಕುರಿತು ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ ಘಟಕ, "ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆಗೆ ಸಿದ್ದರಾಮಯ್ಯ ಅವರ ಬಣದ ಆಕಾಂಕ್ಷಿಗಳಿಗೆ ಮನ್ನಣೆ ನೀಡಿಲ್ಲ. ಡಿಕೆಶಿ ಅವರ ಬಣ ಮೇಲುಗೈ ಸಾಧಿಸಿದೆ. ಹೀಗಾಗಿ ಬಂಡಾಯಗಾರರಿಗೆ ಡಿ.ಕೆ.ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ. ಹಾಗಾದರೆ ಪರ್ಯಾಯವಾಗಿ ಉಚ್ಛಾಟನೆಯ ಬೆದರಿಕೆ ಹಾಕಿದ್ದು ಯಾರಿಗೆ? ಎಂದು ಪ್ರಶ್ನಿಸಿದೆ.
ಇನ್ನು ಜೆಡಿಎಸ್ ಪಕ್ಷದಲ್ಲಿ ಒಂದೇ ಕುಟುಂಬದ 8 ಜನರು ಅಧಿಕಾರ ಹಂಚಿಕೊಂಡಿದ್ದಾರೆ. ಆದರೆ ಕಾಂಗ್ರೆಸ್ ಪಕ್ಷ ಈ ವಿಚಾರದಲ್ಲಿ ಸ್ವಲ್ಪ ಉದಾರಿ. ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನದಿಂದ ಆರಂಭವಾಗಿ ವಿಧಾನಪರಿಷತ್ ಚುನಾವಣಾ ಅಭ್ಯರ್ಥಿ ಆಯ್ಕೆಯವರೆಗೆ ಕಾಂಗ್ರೆಸ್ ಪಕ್ಷ ಕುಟುಂಬವಾದಕ್ಕೆ ಮನ್ನಣೆ ನೀಡಿದೆ ಎಂದು ಹೇಳಿದೆ.