ನವದೆಹಲಿ, ನ.24 (DaijiworldNews/PY): ಭಾರತೀಯ ಕ್ರಿಕೆಟ್ ದಿಗ್ಗಜ, ಬಿಜೆಪಿ ಸಂಸದ ಗೌತಮ್ ಗಂಭೀರ್ ಅವರಿಗೆ ಐಸಿಸ್ ಉಗ್ರರು ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಸ್ವತಃ ಗೌತಮ್ ಗಂಭೀರ್ ಅವರು ಆರೋಪಿಸಿದ್ದು, ತಮಗೆ ಐಸಿಸ್ ಉಗ್ರರು ಕಾಶ್ಮೀರದಿಂದ ಕರೆ ಮಾಡಿ, ಕೊಲೆ ಬೆದರಿಕೆ ಹಾಕಿದ್ದಾಗಿ ಹೇಳಿದ್ದಾರೆ.
"ಗೌತಮ್ ಗಂಭೀರ್ ಅವರು ನೀಡಿದ ದೂರಿನ ಮೇರೆಗೆ ದೆಹಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಗಂಭೀರ್ ಅವರ ಮನೆಯ ಭದ್ರತೆಯನ್ನು ಸಹ ಹೆಚ್ಚಿಸಲಾಗಿದೆ" ಎಂದು ಸೆಂಟ್ರಲ್ ದೆಹಲಿ ಡಿಸಿಪಿ ಶ್ವೇತಾ ಚೌಹಾಣ್ ತಿಳಿಸಿದ್ದಾರೆ.
ಭಾರತೀಯ ಸೇನೆಯಿಂದ ಜಮ್ಮು-ಕಾಶ್ಮೀರದಲ್ಲಿ ಉಗ್ರರನ್ನು ಹೊಡೆದುರುಳಿಸುವ ಕಾರ್ಯ ನಡೆಯುತ್ತಿದೆ. ಉಗ್ರ ಅಡಗುತಾಣಗಳ ಮೇಲೆ ದಾಳಿ ನಡೆಸುತ್ತಿರುವ ಭಾರತೀಯ ಸೇನೆ, ನಾಶಪಡಿಸುವ ಕಾರ್ಯದಲ್ಲಿ ತೊಡಗಿದೆ.