ಬೆಂಗಳೂರು, ನ 24 (DaijiworldNews/MS): ರಾಜ್ಯದಲ್ಲಿ ನ.24 ರಂದು ಬೆಳ್ಳಂಬೆಳಗ್ಗೆ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು (ಎಸಿಬಿ) 60 ಕಡೆಗಳಲ್ಲಿ ಏಕ ಕಾಲಕ್ಕೆ ಕಾರ್ಯಾಚರಣೆ ನಡೆಸಿದೆ. ಹಲವು ಜಿಲ್ಲೆಗಳಲ್ಲಿನ 15 ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಆದಾಯಕ್ಕಿಂತ ಹೆಚ್ಚು ಅಪಾರ ಪ್ರಮಾಣದ ಅಕ್ರಮ ಆಸ್ತಿ ಸಂಪಾದನೆ ದೂರು ಬಂದ ಹಿನ್ನೆಲೆಯಲ್ಲಿ ಕೆಎಸ್ಎಸ್ ಅಧಿಕಾರಿ ನಾಗರಾಜ್ ಮನೆ, ಕಚೇರಿ ಮೇಲೆಯಲ್ಲೂ ಎಸಿಬಿ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಸುಮಾರು 400 ಕ್ಕೂ ಹೆಚ್ಚು ಎಸಿಬಿ ಅಧಿಕಾರಿಗಳಿಂದ ದಾಳಿ ನಡೆದಿದ್ದು ಆಸ್ತಿ ಗಳಿಕೆಗೆ ಸಂಬಂಧಿಸಿದಂತೆ ಪರಿಶೀಲನೆ ನಡೆಯುತ್ತಿದೆ.
ಬೆಂಗಳೂರು, ಕಲಬುರಗಿ, ದಾವಣಗೆರೆ, ಬೆಳಗಾವಿಯ ಗೋಕಾಕ್, ಮಂಡ್ಯದಲ್ಲಿ ಎಸಿಬಿ ದಾಳಿ ನಡೆದಿದೆ. ಬೆಂಗಳೂರು ನಿರ್ಮಿತಿ ಕೇಂದ್ರದ ಮಾಜಿ ಪ್ರಾಜೆಕ್ಟ್ ಮ್ಯಾನೇಜರ್ ವಾಸುದೇವ್, ದೊಡ್ಡಬಳ್ಳಾಪುರದ ಕಂದಾಯ ನಿರೀಕ್ಷಕ ಲಕ್ಷ್ಮೀನರಸಿಂಹಯ್ಯ, ಮಂಗಳೂರು ಸ್ಮಾರ್ಟ್ ಸಿಟಿ ಇಇ ಕೆ.ಎಸ್.ಲಿಂಗೇಗೌಡ, ಮಂಡ್ಯ ಹೆಚ್ಎಲ್ಬಿಸಿ ಇಇ ಕೆ.ಶ್ರೀನಿವಾಸ್,
ಬೆಂಗಳೂರು ನಂದಿನಿ ಡೇರಿಯ ಜನರಲ್ ಮ್ಯಾನೇಜರ್ ಬಿ.ಕೃಷ್ಣಾರೆಡ್ಡಿ, ಗದಗದ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಟಿ.ಎಸ್.ರುದ್ರೇಶಪ್ಪ, ಸಹಕಾರಿ ಅಭಿವೃದ್ಧಿ ಅಧಿಕಾರಿ ಎ.ಕೆ.ಮಸ್ತಿ ನಿವಾಸದ ಮೇಲೆ ದಾಳಿ ನಡೆದಿದೆ.
ಯಲಘಂಕದ ಸರ್ಕಾರಿ ಆಸ್ಪತ್ರೆಯ ಫಿಸಿಯೋಥೆರೆಪಿಸ್ಟ್ ರಾಜಶೇಖರ್ , ಲೋಕೋಪಯೋಗಿ ಇಲಾಖೆಯ ಜೆ.ಇ. ಶಾಂತಗೌಡ ಬಿರಾದಾರ್ ಮನೆ ಮೇಲೆ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು ಶಾಕ್ ನೀಡಿದ್ದಾರೆ.