ಮೈಸೂರು, ನ.24 (DaijiworldNews/PY): "ಜೆಡಿಎಸ್ ಬಿಜೆಪಿ ಲಾಭ ಮಾಡಿಕೊಡುವ ಉದ್ದೇಶದಿಂದ ಕಡಿಮೆ ಸ್ಥಾನದಲ್ಲಿ ಸ್ಪರ್ಧಿಸುವ ತಂತ್ರಗಾರಿಕೆ ನಡೆಸಿದೆ" ಎಂದು ಶಾಸಕ ಜಮೀರ್ ಅಹಮ್ಮದ್ ಖಾನ್ ಆರೋಪಿಸಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, "ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಬಿಜೆಪಿಯೊಂದಿಗೆ ಮ್ಯಾಚ್ ಫಿಕ್ಸಿಂಗ್ ಮಾಡಿಕೊಂಡಿದೆ" ಎಂದು ದೂರಿದ್ದಾರೆ.
"25 ಸ್ಥಾನಗಳಲ್ಲಿ ಗೆಲ್ಲಬೇಕಿತ್ತು. ಆದರೆ, ಕೇವಲ ಏಳು ಸ್ಥಾನಗಳಲ್ಲಿ ಸ್ಪರ್ಧಿಸಿದೆ. ಅಭ್ಯರ್ಥಿ ಇಲ್ಲ ಎದಾದಲ್ಲಿ ಅಭ್ಯರ್ಥಿ ಇಲ್ಲ ಎಂದು ಬಹಿರಂಗವಾಗಿ ಹೇಳಬೇಕು" ಎಂದಿದ್ದಾರೆ.
"ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಭಾಷಣಕ್ಕೆ ನನ್ನ ಬೆಂಬಲಿಗರು ಅಡ್ಡಿಪಡಿಸಿಲ್ಲ. ಪುನೀತ್ ರಾಜ್ಕುಮಾರ್ ಅವರ ಕಾರ್ಯಕ್ರಮ ಇದ್ದ ಹಿನ್ನೆಲೆ ಅವರುಐದು ನಿಮಿಷ ಮಾತನಾಡಿ ತೆರಳಿದ್ದಾರೆ. ಅವರಿಗೆ ನನಗೆ ಜಯಕಾರ ಹಾಕಿದ್ದನ್ನು ಕಂಡು ಸಂತಸವಾಗಿದೆ. ನನ್ನ ಹಾಗೂ ಸಿದ್ದರಾಮಯ್ಯ ಅವರ ಸಂಬಂಧ ಕೆಡುವುದಿಲ್ಲ" ಎಂದು ತಿಳಿಸಿದ್ದಾರೆ.
"ಮಳೆಯ ಪರಿಣಾಮ ಬೆಂಗಳೂರಿನ ನಿವಾಸಿಗಳ ಕಷ್ಟಪಡುತ್ತಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ಕೇವಲ ನೆಪಕ್ಕೆ ನಗರ ಪ್ರದಕ್ಷಿಣೆ ಮಾಡಿದ್ದಾರೆ. ಇದರಿಂದ ಜನರಿಗೆ ಯಾವುದೇ ಪ್ರಯೋಜನವಾಗುವುದಿಲ್ಲ" ಎಂದಿದ್ದಾರೆ.