ನವದೆಹಲಿ, ನ.24 (DaijiworldNews/PY): "ವರ್ಷಾಂತ್ಯಕ್ಕೆ ನಿಯಮಿತ ಅಂತರಾಷ್ಟ್ರೀಯ ವಿಮಾನಗಳು ಪುನರಾರಂಭಗೊಳ್ಳಲಿವೆ" ಎಂದು ನಾಗರೀಕ ವಿಮಾನಯಾನ ಸಚಿವಾಲಯ ಹೇಳಿದೆ.
ಈ ಬಗ್ಗೆ ಮಾಹಿತಿ ನೀಡಿರುವ ರಾಜೀವ್ ಬನ್ಸಾಲ್, "ಅಂತರಾಷ್ಟ್ರೀಯ ವಿಮಾನ ಕಾರ್ಯಾಚರಣೆಗಳು ಸಾಮಾನ್ಯ ಸ್ಥಿತಿಗೆ ಮರಳುವ ನಿರೀಕ್ಷೆ ಇದೆ" ಎಂದು ತಿಳಿಸಿದ್ದಾರೆ.
"ಡಿಸೆಂಬರ್ ಅಂತ್ಯದ ವೇಳೆಗೆ ಭಾರತದಲ್ಲಿ ಅಂತರಾಷ್ಟ್ರೀಯ ವಿಮಾನಗಳ ಹಾರಾಟ ಸಾಮಾನ್ಯ ಸ್ಥಿತಿಗೆ ಮರಳುವ ಸಾಧ್ಯತೆ ಇದೆ" ಎಂದಿದ್ದಾರೆ.
"ಅಂತರಾಷ್ಟ್ರೀಯ ವಿಮಾನ ಕಾರ್ಯಾಚರಣೆಗಳನ್ನು ಸಾಮಾನ್ಯಗೊಳಿಸುವ ಪ್ರಕ್ರಿಯೆಯನ್ನು ಸರ್ಕಾರ ಮೌಲ್ಯಮಾಪನ ಮಾಡುತ್ತಿದೆ" ಎಂದು ಕಳೆದ ವಾರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ತಿಳಿಸಿದ್ದರು.