ಶ್ರೀನಗರ, ನ.24 (DaijiworldNews/PY): ಶ್ರೀನಗರದ ರಾಮ್ಭಾಗ್ನಲ್ಲಿ ಭದ್ರತಾ ಸಿಬ್ಬಂದಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ಮೂರು ಭಯೋತ್ಪಾದಕರನ್ನು ಗುಂಡಿಕ್ಕಿ ಕೊಂದಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ಬಗ್ಗೆ ಮೂಲಗಳನ್ನು ಉದ್ದೇಶಿಸಿ ಸುದ್ದಿಸಂಸ್ಥೆಯೊಂದು ವರದಿ ಮಾಡಿದ್ದು, ಶ್ರೀನಗರದ ರಾಮ್ಬಾಗ್ನಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಮೂವರು ಭಯೋತ್ಪಾದಕರನ್ನು ಗುಂಡಿಕ್ಕಿ ಹತ್ಯಗೈಯಲಾಗಿದೆ ಎಂದಿದೆ.
ಇದಕ್ಕೂ ಮುನ್ನ ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ ಭಯೋತ್ಪಾದಕರು ಹಾಗೂ ಭದ್ರತಾ ಪಡೆಗಳ ನಡುವ ನಡೆಯುತ್ತಿರುವ ಎನ್ಕೌಂಟರ್ನಲ್ಲಿ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದ್ದು, ಕಾರ್ಯಾಚರಣೆ ಮುಂದುವರಿದಿದೆ ಎಂದು ತಿಳಿಸಿತ್ತು.