ಬೆಂಗಳೂರು, ನ 25 (DaijiworldNews/MS): ರಾಜ್ಯದಲ್ಲಿ ಭಾರೀ ಸದ್ದು ಮಾಡಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಮತ್ತೊಂದು ಮಗ್ಗುಳಿಗೆ ಹೊರಳಿದ್ದು, ಪೊಲೀಸ್ ಆಯುಕ್ತ ಕಮಲ್ ಪಂಥ್ ಸೇರಿ ಮೂವರು ಅಧಿಕಾರಿಗಳ ವಿರುದ್ಧ ತನಿಖೆಗೆ ಮ್ಯಾಜಿಸ್ಟ್ರೇಟ್ ಕೋರ್ಟ್ ಆದೇಶ ಹೊರಡಿಸಿದೆ.
ಮ್ಯಾಜಿಸ್ಟ್ರೇಟ್ ಕೋರ್ಟ್, ಸಿಡಿ ಪ್ರಕರಣದಲ್ಲಿ ತಕ್ಷಣ ಕ್ರಮ ವಹಿಸುವಲ್ಲಿ ವಿಫಲವಾದ ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್, ಕೇಂದ್ರ ವಿಭಾಗದ ಡಿಸಿಪಿ ಎಂ.ಎನ್. ಅನುಚೇತನ್ ಹಾಗೂ ಇನ್ಸ್ ಪೆಕ್ಟರ್ ಮಾರುತಿ ವಿರುದ್ಧ ತನಿಖೆ ನಡೆಸುವಂತೆ ಮ್ಯಾಜಿಸ್ಟ್ರೇಟ್ ಕೋರ್ಟ್ ಆದೇಶ ಹೊರಡಿಸಿದೆ.
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಭಾಗಿಯಾಗಿದ್ದಾರೆ ಎನ್ನಲಾದ ಸಿಡಿ ಪ್ರಕರಣದಲ್ಲಿ ಸಂತ್ರಸ್ತೆ ಪರವಾಗಿ ದಾಖಲಾಗಿದ್ದ ದೂರನ್ನು ಪ್ರಥಮ ಮಾಹಿತಿ ವರದಿ (ಎಫ್ಐಆರ್) ದಾಖಲಿಸಲು ವಿಳಂಬ ಮಾಡಿದ ಆರೋಪದ ಮೇಲೆ ಸಂತ್ರಸ್ತೆ ಪರವಾಗಿ ದಾಖಲಾಗಿದ್ದ ದೂರನ್ನು ತಕ್ಷಣ ಎಫ್ ಐಆರ್ ದಾಖಲಿಸದೇ ಕಬ್ಬನ್ ಪಾರ್ಕ್ ಪೊಲೀಸರು ಕರ್ತವ್ಯ ಲೋಪ ಎಸಗಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತರೊಬ್ಬರು ಮ್ಯಾಜಿಸ್ಟ್ರೇಟ್ ಕೋರ್ಟ್ ನಲ್ಲಿ ದೂರು ದಾಖಲಿಸಿದ್ದರು.
ದೂರನ್ನು ವಿಚಾರಣೆ ನಡೆಸಿದ ಮ್ಯಾಜಿಸ್ಟ್ರೇಟ್ ಕೋರ್ಟ್, ಸಿಡಿ ಪ್ರಕರಣದಲ್ಲಿ ತಕ್ಷಣ ಕ್ರಮ ವಹಿಸುವಲ್ಲಿ ವಿಫಲವಾದ ಆರೋಪಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳ ವಿರುದ್ದ ತನಿಖೆಗೆ ಆದೇಶ ಹೊರಡಿಸಿದೆ. ಮ್ಯಾಜಿಸ್ಟ್ರೇಟ್ ಕೋರ್ಟ್ ಆದೇಶದ ಬೆನ್ನಲ್ಲೇ ಪೊಲೀಸ್ ಆಯುಕ್ತ ಕಮಲ್ ಪಂಥ್ ಸೇರಿದಂತೆ ಮೂವರು ಪೊಲೀಸ್ ಅಧಿಕಾರಿಗಳು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.