ಬೆಂಗಳೂರು, ನ.25 (DaijiworldNews/PY): ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ವಿರುದ್ದ ಬಿಜೆಪಿ ವಾಗ್ದಾಳಿ ನಡೆಸಿದ್ದು, ಕೆಪಿಸಿಸಿ ಕಚೇರಿಯಲ್ಲೇ ನಡೆದ "ಪಿಸುಮಾತು" ಪ್ರಕರಣ ನಡೆದು ಅದೆಷ್ಟೋ ದಿನಗಳಾದರೂ ಪ್ರಕರಣದ ರೂವಾರಿ ಉಗ್ರಪ್ಪ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರಿಗೆ ಕ್ರಮ ತೆಗೆದುಕೊಳ್ಳಲು ಸಾಧ್ಯವಾಗಿಲ್ಲವೇಕೆ? ಎಂದು ಪ್ರಶ್ನಿಸಿದೆ.
ಈ ಕುರಿತು ರಾಜ್ಯ ಬಿಜೆಪಿ ಘಟಕ ಟ್ವೀಟ್ ಮಾಡಿದ್ದು, ಕೆಪಿಸಿಸಿ ಕಚೇರಿಯಲ್ಲೇ ನಡೆದ "ಪಿಸುಮಾತು" ಪ್ರಕರಣ ನಡೆದು ಅದೆಷ್ಟೋ ದಿನಗಳಾದರೂ ಪ್ರಕರಣದ ರೂವಾರಿ ಉಗ್ರಪ್ಪ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರಿಗೆ ಕ್ರಮ ತೆಗೆದುಕೊಳ್ಳಲು ಸಾಧ್ಯವಾಗಿಲ್ಲವೇಕೆ? ಉಗ್ರಪ್ಪ ಅವರು ಸಿದ್ದರಾಮಯ್ಯ ಬಣದವರೆಂಬ ಕಾರಣಕ್ಕೆ ಅಲ್ಪಸಂಖ್ಯಾತ ಸಮುದಾಯದ ಸಲೀಂ ವಿರುದ್ಧ ಮಾತ್ರ ಕ್ರಮ ತೆಗೆದುಕೊಳ್ಳಲಾಯ್ತೇ? ಎಂದು ಕೇಳಿದೆ.
"ಪರಿಷತ್ ಚುನಾವಣೆಯಲ್ಲಿ ಯಾರಾದರೂ ಬಂಡಾಯವಾಗಿ ಸ್ಪರ್ಧಿಸಿದರೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಡಿಕೆಶಿ ಎಚ್ಚರಿಸಿದ್ದಾರೆ. ಆದರೆ ಡಿಕೆಶಿ ತಕ್ಕಡಿ ಎದ್ದೇಳುತ್ತಿಲ್ಲ ಎಂದು ಕೆಪಿಸಿಸಿ ಕಚೇರಿಯಲ್ಲೇ ವ್ಯಂಗ್ಯವಾಡಿದ್ದ ಉಗ್ರಪ್ಪ ವಿರುದ್ಧ ಏಕೆ ಇನ್ನೂ ಕ್ರಮ ತೆಗೆದುಕೊಂಡಿಲ್ಲ? ಭಯವೋ, ಬೆದರಿಕೆಯೋ?" ಎಂದು ಪ್ರಶ್ನಿಸಿದೆ.