ಪುಣೆ, ನ.25 (DaijiworldNews/HR): ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ.
ಅಣ್ಣಾ ಹಜಾರೆ ಅವರಿಗೆ ಎದೆ ನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಪುಣೆಯ ರೂಬಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇನ್ನು ಅಣ್ಣಾ ಹಜಾರೆ ಅವರನ್ನು ವೈದ್ಯರ ನಿಗಾದಲ್ಲಿ ಇರಿಸಲಾಗಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ರೂಬಿ ಆಸ್ಪತ್ರೆಯ ಅಧೀಕ್ಷಕ ಡಾ. ಅವಧೂತ್ ಬೊದಮ್ವಾದ್ ತಿಳಿಸಿದ್ದಾರೆ.