ಯಮುನಾನಗರ, ನ. 25 (DaijiworldNews/HR): ಯಮುನಾನಗರ ಜಿಲ್ಲೆಯಲ್ಲಿರುವ ಗುಜರಿ ಗೋದಾಮಿನಲ್ಲಿ ಬೆಂಕಿ ಹೊತ್ತಿಕೊಂಡು ಒಂದೇ ಕುಟುಂಬದ ನಾಲ್ವರು ಸಜೀವ ದಹನವಾಗಿರುವ ಘಟನೆ ನಡೆದಿದೆ.
ಸಾಂದರ್ಭಿಕ ಚಿತ್ರ
ಗುಜರಿ ಸಾಮಗ್ರಿಗಳನ್ನು ಸಂಗ್ರಹಿಸಲಾಗುತ್ತಿದ್ದ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬಳಿಕ ಕೆಲಸ ಮಾಡುತ್ತಿದ್ದ ಕುಟುಂಬಗಳ ಮನೆಗಳಿಗೂ ಬೆಂಕಿ ಆವರಿಸಿಕೊಂಡಿದೆ.
ಇನ್ನು ಈ ಘಟನೆಯಲ್ಲಿ ತಂದೆ ಮತ್ತು ಮೂವರು ಮಕ್ಕಳು ಸಜಿವ ದಹನವಾಗಿದ್ದು, ಅನೇಕ ಮಂದಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬೆಂಕಿಯನ್ನು ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ನಂದಿಸಲು ಹರಸಾಹಸ ಪಟ್ಟು ಒಳಗೆ ಸಿಲುಕಿದ್ದ 17 ಕಾರ್ಮಿಕರನ್ನು ರಕ್ಷಿಸಿದ್ದಾರೆ ಎಂದು ತಿಳಿದು ಬಂದಿದೆ.