ಲಕ್ನೋ, ನ.26 (DaijiworldNews/PY): "ಪಶ್ಚಿಮ ಉತ್ತರಪ್ರದೇಶದಲ್ಲಿ ಗಲಭೆಗಳನ್ನು ಪ್ರಚೋದಿಸುವವರು ಮೊಹಮ್ಮದ್ ಅಲಿ ಜಿನ್ನಾ ಅವರ ಬೆಂಬಲಿಗರು" ಎಂದು ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಬಣ್ಣಿಸಿದ್ದಾರೆ.
ಪಶ್ಚಿಮ ಉತ್ತರ ಪ್ರದೇಶದ ಜೇವರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶಂಕುಸ್ಥಾಪನೆ ಸಮಾರಂಭದಲ್ಲಿ ಮಾತನಾಡಿದ ಯೋಗಿ ಆದಿತ್ಯನಾಥ್, "ಈ ನೆಲದ ರೈತರು ಕೆಲವು ಸಮಯದಲ್ಲಿ ಇಲ್ಲಿ ಬೆಳೆದ ಕಬ್ಬಿನ ಸಿಹಿಯನ್ನು ಹರಡಲು ಯತ್ನಿಸಿದರು. ಆದರೆ, ಇಲ್ಲಿ ಕೆಲವರು ಸರಣಿ ಗಲಭೆ ನಡೆಸಿ ಕಬ್ಬಿನ ಸಿಹಿಯನ್ನು ಹಾಳು ಮಾಡಿದ್ದಾರೆ. ಇಲ್ಲಿನ ಕಬ್ಬಿನ ಮಾಧುರ್ಯಕ್ಕೆ ಹೊಸ ರೆಕ್ಕೆಗಳನ್ನು ನೀಡಬೇಕೋ ಅಥವಾ ಜಿನ್ನಾ ಅನುಯಾಯಿಗಳು ಗಲಭೆಗಳನ್ನು ಉಂಟುಮಾಡುವ ದುಷ್ಕೃತ್ಯಕ್ಕೆ ಅವಕಾಶ ನೀಡಬೇಕೋ ಎಂದು ಇಂದು ದೇಶವು ತೀರ್ಮಾನಿಸಬೇಕಿದೆ" ಎಂದಿದ್ದಾರೆ.
ರೈತರ ಪ್ರತಿಭಟನೆಯ ವೇಳೆ ಲಖಿಂಪುರ ಖೇರಿಯಲ್ಲಿ ನಡೆದ ಹಿಂಸಾಚಾರ, ಎಐಎಂಐಎಂ ನಾಯಕ ಅಸಾದುದ್ದೀನ್ ಓವೈಸಿ ಹೇಳಿಕೆ ಹಾಗೂ ಪೌರತ್ವ ತಿದ್ದುಪಡಿ ಕಾಯ್ದೆ ಹಿಂಪಡೆಯದೇ ಇದ್ದಲ್ಲಿ ಹೋರಾಟದ ವಿರುದ್ದ ಅವರು ಈ ಹೇಳಿಕೆ ನೀಡಿದ್ಧಾರೆ.
ಲಖಿಂಪುರ ಖೇರಿ ಹಿಂಸಾಚಾರದಲ್ಲಿ 8 ಮಂದಿ ಮೃತಪಟ್ಟಿದ್ದರು. ಈ ಪೈಕಿ ನಾಲ್ವರು ರೈತರೂ ಇದ್ದಾರೆ. ಕೃಷಿ ಕಾಯ್ದೆಗಳ ವಿರುದ್ದ ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಿದ ಗುಂಪಿ ಭಾಗವಾಗಿ ಇವರು ಪ್ರತಿಭಟನೆ ನಡೆಸುತ್ತಿದ್ದರು. ಇತ್ತೀಚೆಗೆ ಪ್ರಧಾನಿ ಮೋದಿ ಅವರು ಘೋಷಿಸಿದ ಕಾನೂನುಗಳನ್ನು ರದ್ದುಪಡಿಸಲು ತೀರ್ಮಾನಿಸಲಾಗಿದ್ದು, ಕಳೆದ ವರ್ಷ ಸೆಪ್ಟೆಂಬರ್ನಲ್ಲಿ ಸಂಸತ್ತು ಅಂಗೀಕರಿಸಿದ ಕಾನೂನುಗಳನ್ನು ರದ್ದುಗೊಳಿಸುವ ಮಸೂದೆಯನ್ನು ಕೇಂದ್ರ ಸಚಿವ ಸಂಪುಟವೂ ಅಂಗೀಕರಿಸಿದೆ.
ಕೇಂದ್ರ ಕೃಷಿ ಕಾಯ್ದೆಗಳನ್ನು ಹಿಂಪಡೆಯು ಘೋಷಣೆಯ ಬೆನ್ನಲ್ಲೇ ಪೌರತ್ವ ಕಾಯ್ದೆಯನ್ನು ಸಹ ಹಿಂಪಡೆಯಬೇಕು ಎಂದು ಸರ್ಕಾರವನ್ನು ಮುಸ್ಲಿಂ ಸಂಘಟನೆ ಜಮಿಯತ್ ಉಲೇಮಾ-ಇ-ಹಿಂದ್ ಒತ್ತಾಯಿಸಿದೆ.