ನವದೆಹಲಿ, ನ.26 (DaijiworldNews/HR): ಅಲಹಾಬಾದ್ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಎಸ್.ಎನ್.ಶುಕ್ಲಾ ವಿರುದ್ಧ ಭ್ರಷ್ಟಾಚಾರ ಪ್ರಕರಣವೊಂದಕ್ಕೆ ಸಂಬಂಧಿಸಿ ಕಾನೂನು ಕ್ರಮ ಕೈಗೊಳ್ಳಲು ಸಿಬಿಐಗೆ ಅನುಮತಿ ನೀಡಲಾಗಿದೆ.
ಶುಕ್ಲಾ ಅವರು ಖಾಸಗಿ ಮೆಡಿಕಲ್ ಕಾಲೇಜೊಂದಕ್ಕೆ ಅನುಕೂಲವಾಗುವ ರೀತಿಯಲ್ಲಿ ಆದೇಶ ಹೊರಡಿಸಿದ್ದರು ಎಂಬ ಆರೋಪ ಎದುರಿಸುತ್ತಿದ್ದು, ಅವರ ವಿರುದ್ಧ ಪ್ರಕರಣ ದಾಖಲಿಸಿ, ತನಿಖೆ ನಡೆಸಲು ಅನುಮತಿ ನೀಡುವಂತೆ ಕೋರಿ ಸಿಬಿಐ ಅರ್ಜಿ ಸಲ್ಲಿಸಿದ್ದು, ಇದೀಗ ಅಲಹಾಬಾದ್ ಹೈಕೋರ್ಟ್ ಸಿಬಿಐಗೆ ಅನುಮತಿ ನೀಡಿದೆ.
ಇನ್ನು ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ಎಫ್ಐಆರ್ ದಾಖಲಿಸಿದೆ.
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಲಖನೌ, ಮೀರತ್ ಹಾಗೂ ದೆಹಲಿಯಲ್ಲಿನ ವಿವಿಧ ಸ್ಥಳಗಳ ಮೇಲೆ ಶೋಧ ನಡೆಸಿತ್ತು ಎನ್ನಲಾಗಿದೆ.