ಹಾಸನ, ನ.26 (DaijiworldNews/PY): ಅಮ್ಮಾ ನನ್ನನ್ನು ಕ್ಷಮಿಸು, ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ಧೇನೆ ಎಂದು ತಾಯಿಗೆ ಮೊಬೈಲ್ನಲ್ಲಿ ಮೆಸೇಜ್ ಕಳುಹಿಸಿ 15 ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಬಾಲಕಿಯನ್ನು ಪೂರ್ವಿಕಾ (15) ಎಂದು ಗುರುತಿಸಲಾಗಿದೆ. ಈಕೆ ಹಾಸನದ ಖಾಸಗಿ ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದಳು.
ಬಾಲಕಿ ತಾಯಿಗೆ ಮೊಬೈಲ್ನಲ್ಲಿ ಮೆಸೇಜ್ ಕಳುಹಿಸಿ ಕರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈಕೆಯ ಸಾವಿಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.
ಬಾಲಕಿಯ ಮೆಸೇಜ್ ಓದಿದ ತಾಯಿ ಆತಂಕಗೊಂಡು ತಕ್ಷಣವೇ ಪೊಲೀಸರಿಗೆ ವಿಚಾರ ತಿಳಿಸಿದ್ಧಾರೆ. ಆದರೆ, ಪೊಲೀಸರು ಸ್ಥಳಕ್ಕೆ ಬರುವಷ್ಟರಲ್ಲಿ ಪೂರ್ವಿಕಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬಾಲಕಿಯ ಶವಕ್ಕಾಗಿ ಶೋಧ ಕಾರ್ಯ ನಡೆಸಿದ್ದಾರೆ.
ಆತ್ಮಹತ್ಯೆಗೆ ಏನು ಕಾರಣ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.