ಬೆಂಗಳೂರು, ನ.26 (DaijiworldNews/HR): ರಾಜ್ಯದಲ್ಲಿ ಶುಕ್ರವಾರ 402 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 2994963ಕ್ಕೆ ಏರಿಕೆಯಾಗಿದೆ.
ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿಗಳ ಪ್ರಕಾರ, ರಾಜ್ಯದಲ್ಲಿ ಇಂದು 402 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, ರಾಜ್ಯದಲ್ಲಿನ ಒಟ್ಟಾರೆ ಸೋಂಕಿತರ ಸಂಖ್ಯೆ 2994963ಕ್ಕೆ ಏರಿಕೆಯಾಗಿದೆ. ಇಂದು ಕೊರೊನಾಗೆ 6 ಮಂದಿ ಬಳಿಯಾಗಿದ್ದು, ಆ ಮೂಲಕ ರಾಜ್ಯದಲ್ಲಿ ಕೋವಿಡ್ ಗೆ ಬಲಿಯಾದವರ ಸಂಖ್ಯೆ 38193ಕ್ಕೆ ಏರಿಕೆಯಾಗಿದೆ.
ಇನ್ನು ಕಳೆದ 24 ಗಂಟೆಗಳ ಅವಧಿಯಲ್ಲಿ 277 ಮಂದಿ ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ರಾಜ್ಯದಲ್ಲಿನ ಒಟ್ಟಾರೆ ಗುಣಮುಖರ ಸಂಖ್ಯೆ 2950130ಕ್ಕೆ ಏರಿಕೆಯಾಗಿದೆ. ಪ್ರಸ್ತುತ ರಾಜ್ಯದಲ್ಲಿ 6611 ಸಕ್ರಿಯ ಪ್ರಕರಣಗಳಿವೆ.
ರಾಜ್ಯಾದ್ಯಂತ ಇಂದು 3,23,293 ಡೋಸ್ ಲಸಿಕೆ ನೀಡಲಾಗಿದ್ದು, ಆ ಮೂಲಕ ಈ ವರೆಗೆ ರಾಜ್ಯದಲ್ಲಿ ವಿತರಣೆ ಮಾಡಲಾದ ಕೋವಿಡ್ ಲಸಿಕೆಗಳ ಪ್ರಮಾಣ 7, 24,34,9,983 ಡೋಸ್ ಗೆ ಏರಿಕೆಯಾಗಿದೆ.