ಬೆಂಗಳೂರು, ನ 27 (DaijiworldNews/MS): ಅರಣ್ಯ ನಾಶ ಹೆಚ್ಚಾಗುತ್ತಿರುವ ಹಾಗೂ ತಾಪಮಾನದ ವೈಪರೀತ್ಯ ಹಿನ್ನಲೆಯಲ್ಲಿ ಪ್ರತಿ ಜಿಲ್ಲೆಯಲ್ಲಿ ಕನಿಷ್ಠ ಶೇಕಡಾ 30 ರಷ್ಟು ಅರಣ್ಯ ನಿರ್ಮಾಣಕ್ಕೆ ಅರಣ್ಯ ಇಲಾಖೆ ಸಚಿವ ಉಮೇಶ್ ಕತ್ತಿ ಆದೇಶ ನೀಡಿದ್ದಾರೆ.
ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲಿ ಕನಿಷ್ಠ ಶೇಕಡಾ 30ರಷ್ಟು ಕಾಡು ನಿರ್ಮಾಣ ಆಗಬೇಕು. ಎಲ್ಲಿ ಅರಣ್ಯ ನಿರ್ಮಿಸಲು ಭೂಮಿ ಇಲ್ಲವೋ ಅಂತಹ ಜಿಲ್ಲೆಗಳಲ್ಲಿ ಕಂದಾಯ ಇಲಾಖೆ, ಜಲ ಸಂಪನ್ಮೂಲ ಇಲಾಖೆ ಹೀಗೆ ಬೇರೆ ಬೇರೆ ಇಲಾಖೆಗೆ ಒಳಪಡುವ ಭೂಮಿಯಲ್ಲಿ ಅರಣ್ಯ ಬೆಳೆಸಿ ಎಂದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸಚಿವ ಉಮೇಶ್ ಕತ್ತಿ ಆದೇಶ ನೀಡಿದ್ದಾರೆ.
ವಿಜಯಪುರ, ಬೀದರ್, ಕಲಬುರಗಿ ಸೇರಿ ಕೆಲವು ಜಿಲ್ಲೆಗಳಲ್ಲಿ ಶೇಕಡಾ 10ಕ್ಕಿಂತಲೂ ಕಡಿಮೆ ಅರಣ್ಯ ಭೂಮಿ ಇದೆ. ಈ ಜಿಲ್ಲೆಗಳಲ್ಲಿ ತಾಪಮಾನದ ವೈಪರೀತ್ಯ ಉಂಟಾಗುತ್ತಿದೆ. ಹೀಗಾಗಿ ವನ ಪ್ರದೇಶದ ವೃದ್ಧಿಗೆ ಸಚಿವ ಉಮೇಶ್ ಕತ್ತಿ ಆದೇಶ ನೀಡಿದ್ದಾರೆ