ವಡೋದರಾ, ನ. 27 (DaijiworldNews/HR): 2002 ಫೆಬ್ರವರಿ 27ರಂದು ಗೋದ್ರಾದಲ್ಲಿ ಅಯೋಧ್ಯೆಯಿಂದ ಕರ ಸೇವಕರನ್ನು ಕರೆದೊಯ್ಯುತ್ತಿದ್ದ ಸಬರಮತಿ ಎಕ್ಸ್ ಪ್ರೆಸ್ಗೆ ರೈಲಿನ 6 ಕೋಚ್ಗಳಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಆರೋಪಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಸಾವನ್ನಪ್ಪಿದ್ದಾನೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಆರೋಪಿ ಬಿಲಾಲ್ ಇಸ್ಮಾಯಿಲ್ ಅಬ್ದುಲ್ ಮಜೀದ್(6) ವಡೋದರಾದ ಎಸ್ ಎಸ್ ಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅಲ್ಲಿ ಮೃತಪಟ್ಟಿದ್ದಾನೆ ಎನ್ನಲಾಗಿದೆ.
ಆರೋಪಿಯ ಆರೋಗ್ಯದಲ್ಲಿ ತೊಂದರೆ ಕಾಣಿಸಿಕೊಂಡಿದ್ದು, ಆತನನ್ನು ವೆಂಬರ್ 22 ರಂದು ಜೈಲಿನಿಂದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.
ಇನ್ನು ಈ ದುರಂತದಲ್ಲಿ 59 ಜನರು ಹತ್ಯೆಯಾಗಿದ್ದು, ರಾಜ್ಯಾದ್ಯಂತ ತೀವ್ರ ಹಿಂಸಾಚಾರ ಭುಗಿಲೆದ್ದಿತ್ತು. ಬಿಲಾಲ್ ಮತ್ತಿತರ 10 ಮಂದಿಗೆ 2011ರಲ್ಲಿ ಎಸ್ ಐಟಿ ಕೋರ್ಟ್ ಮರಣ ದಂಡನೆ ನೀಡಿತದ್ದು, ಆ ಬಳಿಕ ಅಕ್ಟೋಬರ್ 2017ರಲ್ಲಿ ಗುಜರಾತ್ ಹೈಕೋರ್ಟ್ ಅವರ ಮರಣ ದಂಡನೆ ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯನ್ನಾಗಿ ಬದಲಾಯಿಸಿತ್ತು.