ನವದೆಹಲಿ, ನ 27 (DaijiworldNews/MS): ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ದೇಶದ ಕೋವಿಡ್-19 ಮತ್ತು ವ್ಯಾಕ್ಸಿನೇಷನ್ ಪರಿಸ್ಥಿತಿ ಕುರಿತು ಮೋದಿ ಅಧ್ಯಕ್ಷತೆಯಲ್ಲಿ ಎರಡು ಗಂಟೆಗಳ ಕಾಲ ಬೆಳಿಗ್ಗೆಉನ್ನತ ಸರ್ಕಾರಿ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದ್ದು , ಮತ್ತೆ ಹೊಸ ಸವಾಲನ್ನು ಎದುರಿಸಲು ಭಾರತ ಕ್ರಿಯಾಶೀಲವಾಗಿರಬೇಕು ಎಂದು ಹೇಳಿದ್ದಾರೆ.
ಇದಲ್ಲದೆ ಕೊವೀಡ್ ರೂಪಾಂತರಿ ಒಮಿಕ್ರೋನ್ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಭಾರತ ಮತ್ತು ಇತರ ದೇಶಗಳ ಮೇಲೆ ಇದರಿಂದಾಗುವ ಪರಿಣಾಮ ಮತ್ತು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಅಧಿಕಾರಿಗಳೊಂದಿಗೆ ವಿಸ್ತೃತವಾಗಿ ಚರ್ಚಿಸಿದ ಪ್ರಧಾನಿ ಮೋದಿ, 'ಈ ಸಂದರ್ಭದಲ್ಲಿ ಕ್ರಿಯಾಶೀಲರಾಗಿದ್ದು, ಅಂತರಾಷ್ಟ್ರೀಯ ಪ್ರಯಾಣ ನಿರ್ಬಂಧಗಳನ್ನು ಸಡಿಲೀಕರಿಸುವ ಯೋಜನೆಗಳನ್ನು ಮತ್ತೆ ಪರಿಗಣಿಸಿ' ಎಂದು ಹೇಳಿದ್ದಾರೆ
ನ.26 ರಂದು ಕೊವೀಡ್ ಸಾಂಕ್ರಮಿಕ ಕಾರಣದಿಂದಾಗಿ 20 ತಿಂಗಳುಗಳಿಂದ ಸ್ಥಗಿತಗೊಳಿಸಲಾಗಿದ್ದ ಅಂತರಾಷ್ಟ್ರೀಯ ವಿಮಾನ ಸಂಚಾರವನ್ನು ಡಿಸೆಂಬರ್ 15 ರಿಂದ ಪುನರಾರಂಭಿಸಲಾಗುವುದು ಎಂದು ಭಾರತ ಸರ್ಕಾರ ಘೋಷಿಸಿತ್ತು. ಇದರ ಬೆನ್ನಲ್ಲೇ ಅಪಾಯಕಾರಿ ಕೊವೀಡ್ ರೂಪಾಂತರಿ ಒಮಿಕ್ರೋನ್ ಪತ್ತೆಯಾಗಿರುವ ಸುದ್ದಿ ಹೊರಬಿದ್ದಿತ್ತು.
ಈ ಹಿನ್ನೆಲೆಯಲ್ಲಿ ಭಾರತ ಮತ್ತು ಇತರ ದೇಶಗಳ ಮೇಲೆ ಇದರಿಂದಾಗುವ ಪರಿಣಾಮ ಮತ್ತು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಅಧಿಕಾರಿಗಳೊಂದಿಗೆ ವಿಸ್ತೃತವಾಗಿ ಗಿ ಚರ್ಚಿಸಿದ ಪ್ರಧಾನಿ ಮೋದಿ, 'ಈ ಸಂದರ್ಭದಲ್ಲಿ ಕ್ರಿಯಾಶೀಲರಾಗಿದ್ದು, ಅಂತರಾಷ್ಟ್ರೀಯ ಪ್ರಯಾಣ ನಿರ್ಬಂಧಗಳನ್ನು ಸಡಿಲೀಕರಿಸುವ ಯೋಜನೆಗಳನ್ನು ಮತ್ತೆ ಪರಿಗಣಿಸಿ' ಎಂದು ಅಧಿಕಾರಿಗಳಿಗೆ ತಿಳಿಸಿದ್ದಾರೆ ಎಂದು ವರದಿ ತಿಳಿಸಿದೆ.