ಬೆಂಗಳೂರು, ನ.27 (DaijiworldNews/PY): "ವಿಪಕ್ಷ ನಾಯಕ ಸಿದ್ದರಾಮಯ್ಯ ಓರ್ವ ಡೋಂಗಿ ರಾಜಕಾರಣಿ. ಹೊಟ್ಟೆಪಾಡಿಗಾಗಿ ಅವರು ಕಾಂಗ್ರೆಸ್ ಪಕ್ಷಕ್ಕೆ ಹೋದವರು" ಎಂದು ಬಿಜೆಪಿ ರಾಜ್ಯ ವಕ್ತಾರ ಮತ್ತು ಎಸ್.ಸಿ.ಮೋರ್ಚಾ ರಾಜ್ಯ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ.
"ಸಿದ್ದರಾಮಯ್ಯ ಅವರು ಇತ್ತೀಚೆಗೆ ಕಾಂಗ್ರೆಸ್ ಅನ್ನು ಹೊಗಳಲು ಶುರುಮಾಡಿದ್ದಾರೆ. ಅವರು ಇತ್ತೀಚೆಗೆ ಕಾಂಗ್ರೆಸ್ ಪಕ್ಷವನ್ನು ಸೇರಿದವರು. ಇದಕ್ಕೂ ಮುನ್ನ ಅವರು ಬೇರೆ ಕಡೆ ಇದ್ದರು. ಬದ್ದತೆ ಇಲ್ಲದ ಸಮಯಸಾಧಕ ರಾಜಕಾರಣಿಯಾಗಿರುವ ಸಿದ್ದರಾಮಯ್ಯ ಹೊಟ್ಟೆಪಾಡಿಗಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದಾರೆ" ಎಂದು ಟೀಕಿಸಿದ್ದಾರೆ.
"ಸಂವಿಧಾನದ ಮೇಲೆ ಕೈ ನಾಯಕರಿಗೆ ಗೌರವವಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣದ ವೇಳೆ ಸಂವಿಧಾನದ ದಿನವನ್ನೇ ಕಾಂಗ್ರೆಸ್ ಬಹಿಷ್ಕರಿಸಿದೆ. ಸಂವಿಧಾನದ ದಿನದ ಬಗ್ಗೆ ಸಿದ್ದರಾಮಯ್ಯ ಅವರು ಆಕ್ಷೇಪಿಸಿದ್ಧಾರೆ. ಕಾಂಗ್ರೆಸ್ ಪಕ್ಷ ಸಂವಿಧಾನ ವಿರೋಧಿ ಎನ್ನುವುದಕ್ಕೆ ಇದು ಉದಾಹರಣೆ" ಎಂದು ಹೇಳಿದ್ದಾರೆ.
"ಸಿದ್ದರಾಮಯ್ಯ ಅವರು ಹಿಂದೆ ಜನತಾದಳದಲ್ಲಿದ್ದಾಗ ಇಂದಿರಾ ಗಾಂಧಿ ಅವರು ತುರ್ತು ಪರಿಸ್ಥಿತಿ ಘೋಷಿಸಿದ್ದಾಗ ಅದನ್ನು ಸಂಪೂರ್ಣವಾಗಿ ವಿರೋಧ ವ್ಯಕ್ತಪಡಿಸಿದ್ದರು" ಎಂದಿದ್ದಾರೆ.