ಬೆಂಗಳೂರು, ನ. 27 (DaijiworldNews/HR): ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 322 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 29,95,285ಕ್ಕೆ ಏರಿಕೆಯಾಗಿದೆ.
ರಾಜ್ಯ ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಇಂದು 322 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 29,95,285ಕ್ಕೆ ಏರಿಕೆಯಾಗಿ, 176 ಸೋಂಕಿತರು ಗುಣಮುಖರಾಗಿದ್ದಾರೆ.
ಇನ್ನು ರಾಜ್ಯದಲ್ಲಿ ಸದ್ಯ 6,754 ಸಕ್ರಿಯ ಪ್ರಕರಣಗಳಿದ್ದು, ಸೋಂಕಿಗೆ ಇಂದು ಮೂವರು ಮೃತಪಟ್ಟಿದ್ದು, ಇದರೊಂದಿಗೆ ಸೋಂಕಿನಿಂದ ಈವರೆಗೂ ಮೃತಪಟ್ಟವರ ಸಂಖ್ಯೆ 38,196 ಆಗಿದೆ.
ರಾಜ್ಯದಲ್ಲಿ ಸೋಂಕಿನ ಪ್ರಮಾಣ ಶೇ 0.34 ರಷ್ಟಿದ್ದು, ಮರಣ ಪ್ರಮಾಣ ಶೇ. 0.93 ರಷ್ಜಿದೆ.