ರಾಮನಗರ, ನ. 28 (DaijiworldNews/HR): "ಬಿಜೆಪಿಯವರು ವಿಧಾನ ಪರಿಷತ್ ಚುನಾವಣೆಯಲ್ಲಿ ಕನಿಷ್ಠ 15 ಸ್ಥಾನ ಗೆಲ್ಲುತ್ತೇವೆ ಎನ್ನುತ್ತಾರೆ. ಅದೇ ರೀತಿ ಸೋಲುವ ಉಳಿದ 10 ಕ್ಷೇತ್ರಗಳು ಯಾವುವು ಎಂಬುದನ್ನೂ ಬಹಿರಂಗಪಡಿಸಬೇಕು" ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು "ಬಿಜೆಪಿ 25 ಕ್ಷೇತ್ರಗಳನ್ನೂ ಗೆಲ್ಲಬಹುದು. ಅವರು ಮತ್ತು ಜೆಡಿಎಸ್ನವರು ಯಾವಾಗ ಕಿತ್ತಾಡುತ್ತಾರೋ ಯಾವಾಗ ಒಂದಾಗುತ್ತಾರೋ ಅವರಿಗೇ ಗೊತ್ತು" ಎಂದರು.
ಇನ್ನು ಮುಂದಿನ ಚುನಾವಣೆಯಲ್ಲಿ 15 ಸ್ಥಾನ ಗೆಲ್ಲುತ್ತೇವೆ ಎಂದು ಬಿಜೆಪಿಯವರು ಹೇಳುತ್ತಿದ್ದಾರೆ. ಆದರೆ ಸೋಲುವ ಉಳಿದ 10 ಕ್ಷೇತ್ರಗಳು ಯಾವುವು ಎಂಬುದನ್ನೂ ಬಹಿರಂಗಪಡಿಸಬೇಕು" ಎಂದು ಒತ್ತಾಯಿಸಿದ್ದಾರೆ.