ಕೋಲ್ಕತಾ, ನ. 28 (DaijiworldNews/HR): ನಿಂತಿದ್ದ ಟ್ರಕ್ಗೆ ಅಂತ್ಯ ಕ್ರಿಯೆಗೆ ತೆರಳುತ್ತಿದ್ದ ಇನ್ನೊಂದು ಮಿನಿ ಟ್ರಕ್ ಡಿಕ್ಕಿ ಹೊಡೆದು 15 ಮಂದಿ ಸಾವನ್ನಪ್ಪಿರುವ ಘಟನೆ ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿ ಇಂದು ನಸುಕಿನ ವೇಳೆ ನಡೆದಿದೆ.
ಸಾಂದರ್ಭಿಕ ಚಿತ್ರ
ಈ ಕುರಿತು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದು, ಮಿನಿ ಟ್ರಕ್ನಲ್ಲಿ 35ಕ್ಕೂ ಅಧಿಕ ಜನರಿದ್ದು, ಬೆಳಗಿನ ಜಾವ 3 ಗಂಟೆ ಸುಮಾರಿಗೆ ಹಂಸಖಾಲಿ ಎಂಬಲ್ಲಿ ಹೆದ್ದಾರಿಯ ಬದಿಯಲ್ಲಿ ನಿಂತಿದ್ದ ಮತ್ತೊಂದು ಕಲ್ಲು ತುಂಬಿದ ಟ್ರಕ್ಗೆ ಡಿಕ್ಕಿ ಹೊಡೆದು 12 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಆಸ್ಪತ್ರೆಯಲ್ಲಿ ಕೊನೆಯುಸಿರು ಎಳೆದಿದ್ದಾರೆ ಎಂದು ತಿಳಿಸಿದ್ದಾರೆ.
ಇನ್ನು ಐದಿನೈದು ಮಂದಿಯ ಪೈಕಿ ಮಹಿಳೆಯರು ಸೇರಿದ್ದು, ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇನ್ನು ದಟ್ಟ ಮಂಜು ಆವರಿಸಿದ್ದ ಕಾರಣ ಅವಘಡ ನಡೆದಿದೆ ಎಂದು ವರದಿಯಾಗಿದೆ.