ಚೆನ್ನೈ, ನ. 28 (DaijiworldNews/HR): ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ತಮಿಳುನಾಡಿನಲ್ಲಿ ಮಳೆ ಮುಂದುವರೆದಿದ್ದು, ಚೆನ್ನೈನ ಅನೇಕ ಪ್ರದೇಶಗಳು ಜಲಾವೃತಗೊಂದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.
ಸಾಂದರ್ಭಿಕ ಚಿತ್ರ
ಕಳೆದ ಎರಡು ದಿನಗಳಿಂದ ಚೆನ್ನೈ ಮತ್ತು ದಕ್ಷಿಣದ ಜಿಲ್ಲೆಗಳು, ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲಿ ಮಳೆಯಾಗುತ್ತಿದ್ದು, ಪುದುಚೇರಿ ಮತ್ತು ಕಾರೈಕಲ್ ಪ್ರದೇಶದಲ್ಲಿ ಶುಕ್ರವಾರ ಮತ್ತು ಶನಿವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು.
ಇನ್ನು ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದೆ, ರಸ್ತೆಗಳು ಜಲಾವೃತವಾಗಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ಸರ್ಕಾರ ಸೂಚನೆ ನೀಡಿದೆ.