ನವದೆಹಲಿ, ನ. 29 (DaijiworldNews/SM): ಚಳಿಗಾಲದ ಅಧಿವೇಶನದಲ್ಲಿ ಅಶಿಸ್ತು ಪ್ರದರ್ಶನ ಹಿನ್ನೆಲೆಯಲ್ಲಿ ರಾಜ್ಯಸಭೆಯ ವಿರೋಧ ಪಕ್ಷದ ಹನ್ನೆರಡು ಮಂದಿ ಸದ್ಯಸ್ಯರನ್ನು ಅಮಾನತುಗೊಳಿಸಲಾಗಿದೆ.
ಅಮಾನತುಗೊಂಡಿರುವ 12 ಮಂದಿ ಸಂಸದರ ಪೈಕಿ ಆರು ಮಂದಿ ಕಾಂಗ್ರೆಸ್ ಸದಸ್ಯರಾಗಿದ್ದಾರೆ. ಟಿಎಂಸಿ ಹಾಗೂ ಶಿವಸೇನೆಯ ಇಬ್ಬರು ಸಿಪಿಎಂ ಹಾಗೂ ಸಿಪಿಐ ನ ತಲಾ ಒಬ್ಬರು ಅಮಾನತುಕೊಂಡಿದ್ದಾರೆ.
ರಾಜ್ಯಸಭೆಯ ಉಪ ಸಭಾಪತಿ ಹರಿವಂಶ ನಾರಾಯಣ ಸಿಂಗ್ ಅವರು ಅಮಾನತು ಘೋಷಣೆ ಮಾಡಿದ್ದಾರೆ. ಅಲ್ಲದೆ, ಸದನವನ್ನು ಮಂಗಳವಾರಕ್ಕೆ ಮುಂದೂಡಿದ್ದಾರೆ. ಕಾಂಗ್ರೆಸ್ನ ಫೂಲೋ ದೇವಿ ನೇತಮ್, ಛಾಯಾ ವರ್ಮಾ, ರಿಪುನ್ ಬೋರಾ, ರಾಜಮಣಿ ಪಟೇಲ್, ಸೈಯದ್ ನಾಸಿರ್ ಹುಸೇನ್ ಮತ್ತು ಅಖಿಲೇಶ್ ಪ್ರಸಾದ್ ಸಿಂಗ್ ಅಮಾನತುಗೊಂಡಿದ್ದಾರೆ.