ವಿಜಯಪುರ, ನ 30 (DaijiworldNews/MS): ಈ ಹಿಂದೆ ಯಡಿಯೂರಪ್ಪ ಅವರ ರಾಜೀನಾಮೆ ಪಡೆದಂತೆ, ರಾಜ್ಯ ಬಿಜೆಪಿ ಸರಕಾರದಲ್ಲಿ ಮತ್ತೊಮ್ಮೆ ಸಿಎಂ ಬದಲಾವಣೆ ಖಂಡಿತಾ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭವಿಷ್ಯ ನುಡಿದಿದ್ದಾರೆ.
ಮಾಧ್ಯಮದೊಂದಿಗೆ ಜತೆ ಮಾತನಾಡಿದ ಅವರು ಈ ಹಿಂದೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಬಿ.ಎಸ್ ಯಡಿಯೂರಪ್ಪ ಅವರಿಗೆ ಅವರ ಹೈಕಮಾಂಡ್ ಸೂಚಿಸಿತ್ತು. ಇದೀಗ ಅಧಿಕಾರಕ್ಕೆ ಬಂದ ಬಸವರಾಜ ಬೊಮ್ಮಾಯಿ ಸರಕಾರದ ಮೇಲೂ ಅವರದೇ ಸಚಿವರು ಇದೀಗ ಸಂಶಯ ವ್ಯಕ್ತಪಡಿಸುತ್ತಿದ್ದಾರೆ. ಹೀಗಾಗಿ ಬೊಮ್ಮಾಯಿ ಕೂಡ ರಾಜೀನಾಮೆ ಕೊಡಬೇಕಾಗುತ್ತದೆ ಎಂದು ಶಿವಕುಮಾರ್ ಹೇಳಿದ್ದಾರೆ
ರಾಜ್ಯದಲ್ಲಿ ಬಿಜೆಪಿ ಸರಕಾರದಲ್ಲಿ ಭ್ರಷ್ಟಾಚಾರ ತುಂಬಿತುಳುಕುತ್ತಿದ್ದು , ಆಡಳಿತ ಯಂತ್ರದ ಕುಸಿದು ಹೋಗಿದೆ. ಈ ಬಗ್ಗೆ ಕಾಂಗ್ರೆಸ್ ನಾಯಕರೇನೂ ಮಾತನಾಡುತ್ತಿಲ್ಲ. ಯಾಕೆಂದರೆ ನಮ್ಮ ಬದಲಾಗಿ ಬೊಮಾಯಿ ಸರಕಾರದಲ್ಲಿರುವ ಸಚಿವರೇ ಮಾತನಾಡುತ್ತಿದ್ದಾರೆ. ಇತರ ಸಚಿವರಿಗಿಂತ ಒಂದು ಹೆಜ್ಜೆ ಮುಂದೆ ಹೋಗಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಸಚಿವ ಮುರುಗೇಶ ನಿರಾಣಿ ಮುಂದಿನ ಮುಖ್ಯಮಂತ್ರಿ ಎಂದು ಹೇಳಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.