ನವದೆಹಲಿ, ನ. 30 (DaijiworldNews/HR): ಭಾರತದಲ್ಲಿ ಕೊರೊನಾದ ಹೊಸ ರೂಪಾಂತರಿ ಒಮಿಕ್ರಾನ್ ವೈರಸ್ ಪ್ರಭೇದ ಇದುವರೆಗೆ ಪತ್ತೆಯಾಗಿಲ್ಲ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನ್ ಸುಖ್ ಮಾಂಡವೀಯಾ ಹೇಳಿದ್ದಾರೆ.
ಒಮಿಕ್ರಾನ್ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ನೂತನ ಪ್ರಭೇದದ ಸೋಂಕು ಜಗತ್ತಿನ 14 ದೇಶಗಳಲ್ಲಿ ಪತ್ತೆಯಾಗಿದ್ದು, ಭಾರತದಲ್ಲಿ ಈವರೆಗೂ ಒಂದೂ ಒಮಿಕ್ರಾನ್ ಪ್ರಕರಣ ವರದಿಯಾಗಿಲ್ಲ. ಆದರೆ ಮುಂಜಾಗ್ರತಾ ಕ್ರಮವಾಗಿ ನಾವು ಎಲ್ಲಾ ರೀತಿಯ ಕ್ರಮಗಳನ್ನು ತೆಗೆದುಕೊಳ್ಳಲಿದ್ದೇವೆ" ಎಂದರು.
ಇನ್ನು "ನಮ್ಮ ದೇಶದಲ್ಲಿ ಕೊರೊನಾ ನಿಯಂತ್ರಣದಲ್ಲಿದ್ದು, ಸೋಂಕು ಸಂಪೂರ್ಣವಾಗಿ ಹೋಗಿಲ್ಲ. ದೇಶಾದ್ಯಂತ ಈವರೆಗೆ 124 ಕೋಟಿ ಕೋವಿಡ್ ಲಸಿಕೆ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ವಿಶ್ವ ಆರೋಗ್ಯ ಸಂಸ್ಥೆ ವರ್ಗೀಕರಿಸಿದಂತೆ ನೂತನ ರೂಪಾಂತರಿ ತಳಿಯನ್ನು ಒಮಿಕ್ರಾನ್ (ಬಿ.1.1.529) ಎಂದು ಹೆಸರಿಸಿತ್ತು.