ಹಾಸನ, ನ. 30 (DaijiworldNews/HR): ಸಚಿವ ಗೋಪಾಲಯ್ಯ ನೇತೃತ್ವದಲ್ಲಿ ವಿಧಾನ ಪರಿಷತ್ ಚುನಾವಣೆಗಾಗಿ ಪ್ರಚಾರ ಕಾರ್ಯ ಹಮ್ಮಿಕೊಳ್ಳಲಾಗಿದ್ದು, ಈ ಚುನಾವಣಾ ಪ್ರಚಾರದ ಸಭೆಯಲ್ಲೇ ಬಿಜೆಪಿ ಕಾರ್ಯಕರ್ತರು ಪರಸ್ಪರ ಸಚಿವರೆದುರೇ ಹೊಡೆದಾಡಿಕೊಂಡ ಘಟನೆ ಅರಸೀಕೆರೆಯಲ್ಲಿ ನಡೆದಿದೆ.
ಸಾಂದರ್ಭಿಕ ಚಿತ್ರ
ಇಂದು ಸಚಿವ ಗೋಪಾಲಯ್ಯ ನೇತೃತ್ವದಲ್ಲಿ ಹಾಸನ ಜಿಲ್ಲೆಯ ಅರಸೀಕೆರೆ ನಗರದಲ್ಲಿ ಬಿಜೆಪಿಯ ವಿಧಾನ ಪರಿಷತ್ ಅಭ್ಯರ್ಥಿ ಪರವಾಗಿ ಚುನಾವಣಾ ಪ್ರಚಾರ ಸಭೆ ನಡೆಸಲಾಗುತ್ತಿದ್ದು, ಪ್ರಚಾರ ಸಭೆಯಲ್ಲೇ ಚುನಾವಣೆಗೆ ಬೆಂಬಲ ನೀಡುವ ವಿಚಾರವಾಗಿ ಬಿಜೆಪಿ ಕಾರ್ಯಕರ್ತರ ನಡುವೆ ವಾಗ್ವಾದ ನಡೆದು ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿ ಸಚಿವರ ಎದುರೇ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ.
ಇನ್ನು ಬಿಜೆಪಿ ಕಾರ್ಯಕರ್ತರ ಮಾರಾಮಾರಿಯಲ್ಲಿ ನಾಲ್ವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಗಾಯಗೊಂಡ ಬಿಜೆಪಿ ಕಾರ್ಯಕರ್ತರು ತಾಲೂಕು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.