ಜೈಪುರ, ಡಿ. 01 (DaijiworldNews/HR): ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರವು ರಾಜ್ಯಗಳನ್ನು ಬಲಪಡಿಸುವುದನ್ನು ಬಿಟ್ಟು ದುರ್ಬಲಗೊಳಿಸುತ್ತಿದೆ ಎಂದು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಆರೋಪಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಕಾಂಗ್ರೆಸ್ ಕಾರ್ಯಕರ್ತರು ಮತ್ತು ಜನಪ್ರತಿನಿಧಿಗಳು ತಮ್ಮ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸಿದರೆ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ರಾಜ್ಯದಲ್ಲಿ ಅಧಿಕಾರಕ್ಕೇರುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ" ಎಂದರು.
ಇನ್ನು ಹಿಂದಿನ ಸರ್ಕಾರವಿದ್ದಾಗ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಹೇರುತ್ತಿದ್ದ ಅಬಕಾರಿ ಸುಂಕವನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಂಚಿಕೊಳ್ಳುತ್ತಿತ್ತು. ಆದರೆ ಈಗಿನ ಸರ್ಕಾರವು ಹೆಚ್ಚಿನ ಅಬಕಾರಿ ಸುಂಕ, ವಿಶೇಷ ಅಬಕಾರಿ ಮತ್ತು ಸೆಸ್ ಅನ್ನು ಹೇರಿ ಇಂಧನ ಬೆಲೆಯಲ್ಲಿ ಹೆಚ್ಚಳ ಮಾಡಿದ್ದರೂ ಕೂಡ ರಾಜ್ಯಗಳಿಗೆ ಪಾಲನ್ನು ನೀಡದೆ ಪೂರ್ತಿ ಹಣವು ಕೇಂದ್ರವೇ ಇಟ್ಟುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ.