ದೆಹಲಿ, ಡಿ. 01 (DaijiworldNews/HR): ಸಂಸತ್ತಿನ ಕೊಠಡಿ ಸಂಖ್ಯೆ 59 ರಲ್ಲಿ ಇಂದು ಬೆಳ್ಳಗೆ ಬೆಂಕಿ ಕಾಣಿಸಿಕೊಂಡಿರುವ ಘಟನೆ ನಡೆದಿದೆ.
ಸಾಂದರ್ಭಿಕ ಚಿತ್ರ
ಈ ಕುರಿತು ದೆಹಲಿ ಅಗ್ನಿಶಾಮಕ ಇಲಾಖೆಯು ಮಾಹಿತಿ ನೀಡಿದ್ದು, ಇಂದು ಬೆಳಿಗ್ಗೆ 8 ಗಂಟೆ ಸುಮಾರಿಗೆ ಸಂಸತ್ತಿನ ಕೊಠಡಿ ಸಂಖ್ಯೆ 59 ರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿಯನ್ನು ಹತೋಟಿಗೆ ತರಲಾಗಿದೆ" ಎಂದು ತಿಳಿಸಿದ್ದಾರೆ.
ಸಂಸತ್ತಿನ ಚಳಿಗಾಲದ ಅಧಿವೇಶನ ಸೋಮವಾರ ಆರಂಭಗೊಂಡಿದ್ದು, ಡಿಸೆಂಬರ್ 23 ರಂದು ಮುಕ್ತಾಯವಾಗುವ ಸಾಧ್ಯತೆ ಇದೆ.