ಮುಂಬೈ, ಡಿ.01 (DaijiworldNews/PY): ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ತಮ್ಮ ಮುಂಬೈ ಪ್ರವಾಸದ ಸಮಯದಲ್ಲಿ ಆದಿತ್ಯ ಠಾಕ್ರೆ ಹಾಗೂ ಸಂಜಯ್ ರಾವತ್ ಅವರನ್ನು ಭೇಟಿ ಮಾಡಿದ್ದಾರೆ.
"ಆದಿತ್ಯ ಠಾಕ್ರೆ ಅವರು ಭವಿಷ್ಯದ ರಾಷ್ಟ್ರೀಯ ನಾಯಕ ಮತ್ತು ರಾಷ್ಟ್ರಕ್ಕಾಗಿ ಒಳ್ಳೆಯ ಕೆಲಸಗಳನ್ನು ಮಾಡುವ ವ್ಯಕ್ತಿ ಎಂದು ಬಣ್ಣಿಸಿದ್ದಾರೆ" ಎಂದು ಮಮತಾ ಬ್ಯಾನರ್ಜಿ ಹೇಳಿರುವುದಾಗಿ ಮೂಲಗಳು ತಿಳಿಸಿವೆ.
"ಬಿಜೆಪಿಯನ್ನು ನಾವು ಒಟ್ಟಾಗಿ ಎದುರಿಸಬೇಕು. ಬಿಜೆಪಿ ನಮ್ಮನ್ನು ವೈಯುಕ್ತಿವಾಗಿ ಗುರಿಯಾಗಿಸಿಕೊಂಡಿದೆ. ಹಾಗಾಗಿ ನಾವೆಲ್ಲರೂ ಒಗ್ಗಟ್ಟಾಗಿ ಹೋರಾಡಬೇಕಾಗಿದೆ" ಎಂದು ಆದಿತ್ಯ ಠಾಕ್ರೆ ತಿಳಿಸಿದ್ದಾರೆ.
ಕೈಗಾರಿಕೋದ್ಯಮಿಗಳನ್ನು ಭೇಟಿ ಮಾಡಲು ಎರಡು ದಿನಗಳ ಮುಂಬೈಗೆ ಭೇಟಿ ನೀಡಿರುವ ಮಮತಾ ಬ್ಯಾನರ್ಜಿ ಅವರು, ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರನ್ನು ಭೇಟಿ ಮಾಡಲು ತೀರ್ಮಾನಿಸಿದ್ದಾರೆ.
ಮಮತಾ ಬ್ಯಾನರ್ಜಿ ಅವರು ಮುಂಬೈ ಪ್ರವಾಸದ ಮೊದಲ ದಿನ ಸಿಎಂ ಉದ್ಧವ್ ಠಾಕ್ರೆ ಅವರನ್ನು ಭೇಟಿಯಾಗಬೇಕಿತ್ತು. ಆದರೆ, ಠಾಕ್ರೆ ಅವರಿಗೆ ಅನಾರೋಗ್ಯದ ಹಿನ್ನೆಲೆ ಈ ಸಭೆ ನಡೆಯಲು ಸಾಧ್ಯವಾಗಲಿಲ್ಲ. ಹಾಗಾಗಿ ಮಮತಾ ಬ್ಯಾನರ್ಜಿ ಅವರು ಉದ್ಧವ್ ಠಾಕ್ರೆ ಅವರ ಮಕ್ಕಳಾದ ಆದಿತ್ಯ ಠಾಕ್ರೆ ಹಾಗೂ ಸಂಜಯ್ ರಾವತ್ ಅವರನ್ನು ಭೇಟಿ ಮಾಡಿದ್ದಾರೆ.