ಪುಲ್ವಾಮ, ಡಿ. 01 (DaijiworldNews/HR): ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದ ಕಸ್ಬಾ ಯಾರ್ ಪ್ರದೇಶದಲ್ಲಿ ಇಂದು ಬೆಳ್ಳಂಬೆಳಗ್ಗೆ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿ ಜೈಷ್ -ಇ-ಮೊಹಮ್ಮದ್ ಉಗ್ರ ಸಂಘಟನೆಯ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ.
ಸಾಂದರ್ಭಿಕ ಚಿತ್ರ
ಕಸ್ಟಾ ಯಾರ್ ಪ್ರದೇಶದಲ್ಲಿ ಅಡಗಿ ಕುಳಿತಿದ್ದ ಉಗ್ರರು ಸೇನಾಪಡೆ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ಭಾರತೀಯ ಸೇನೆ ಸುತ್ತುವರೆದ ಎನ್ ಕೌಂಟರ್ ನಡೆಸಿ ಇಬ್ಬರು ಉಗ್ರರನ್ನು ಹತ್ಯೆ ಮಾಡಿದ್ದಾರೆ ಎಂದು ತಿಳಿದಿಬಂದಿದೆ.
ಇನ್ನು ಹತ್ಯೆಯಾದ ಇಬ್ಬರು ಉಗ್ರರು ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಯವರಾಗಿದ್ದು, ಹತ್ಯೆಯಾದವರನ್ನು ಯಾಸಿರ್ ಪರ್ರೆ, ಫುರ್ಖಾನ್ ಎಂದು ಗುರುತಿಸಲಾಗಿದೆ.