ಬೆಂಗಳೂರು, ಡಿ. 01 (DaijiworldNews/HR): ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ್ ಹತ್ಯೆಗೆ ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ಸಂಚು ರೂಪಿಸಿದ್ದಾರೆ ಎನ್ನಲಾದ ವಿಡಿಯೋ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯಿಸಿ, ಇದೆಲ್ಲ ರಾಜಕೀಯದಲ್ಲಿ ಇದ್ದಿದ್ದೆ. ಎಲ್ಲಾ ರೌಡಿಗಳು ವಿಶ್ವನಾಥ್ ಜೊತೆ ಇದ್ದಾರೆ. ಅವರ ಲಿಸ್ಟ್ ಬೇಕಾದರೂ ಕೊಡುತ್ತೇನೆ ಎಂದಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಇದೆಲ್ಲ ರಾಜಕೀಯದಲ್ಲಿ ಇದ್ದಿದ್ದೆ. ಎಲ್ಲಾ ರೌಡಿಗಳು ವಿಶ್ವನಾಥ್ ಜೊತೆ ಇದ್ದಾರೆ. ಅವರ ಲಿಸ್ಟ್ ಬೇಕಾದರೂ ಕೊಡುತ್ತೇನೆ. ಇದರಲ್ಲಿ ಯಾರೇ ತಪ್ಪು ಮಾಡಿದರೂ ಅವರ ವಿರುದ್ಧ ಕ್ರಮ ಕೈಗೊಳ್ಳಲಿ" ಎಂದರು.
ಇನ್ನು ಗೋಪಾಲಕೃಷ್ಣ ಜೊತೆಯೂ ನಾನು ಮಾತನಾಡಿದ್ದೇನೆ. ನಾನು ಯಾವುದೇ ತಪ್ಪು ಮಾಡಿಲ್ಲ ಎಂದಿದ್ದಾರೆ. ತಪ್ಪು ಯಾರೇ ಮಾಡಿದರೂ ಅವರ ವಿರುದ್ಧ ಕ್ರಮ ಜರುಗಿಸಲಿ" ಎಂದು ಹೇಳಿದ್ದಾರೆ.