ಹುಬ್ಬಳ್ಳಿ, ಡಿ.01 (DaijiworldNews/PY): ಎಂ ಎಂ ಕಲಬುರ್ಗಿ ಹತ್ಯೆ ಪ್ರಕರಣದ ಇಬ್ಬರು ಆರೋಪಿಗಳನ್ನು ಪೊಲೀಸರು ಬೈಕ್ ಕಳ್ಳತನದ ಆರೋಪದ ವಿಚಾರಣೆಗಾಗಿ ಹುಬ್ಳ್ಳಿ 1ನೇ ಜೆಎಂಎಫ್ಸಿ ನ್ಯಾಯಾಲಯಕ್ಕೆ ಬುಧವಾರ ಹಾಜರುಪಡಿಸಿದ್ದಾರೆ.
ಆರೋಪಿಗಳನ್ನು ಮುಂಬೈ ಜೈಲಿನಿಂದ ಹುಬ್ಬಳ್ಳಿಗೆ ಕರೆ ತಂದಿದ್ದ ಗ್ರಾಮೀಣ ಠಾಣೆ ಪೊಲೀಸರು, ವಿಚಾಋಣೆ ಮುಗಿದ ಬಳಿಕ ಬೈಕ್ ಮಹಜರು ನಡೆಸಲು ಠಾಣೆಗೆ ಕರೆದೊಯ್ದಿದ್ದಾರೆ.
"ಎಂ ಎಂ ಕಲಬುರ್ಗಿ ಅವರ ಹತ್ಯೆ ಪ್ರಕರಣದಲ್ಲಿ ಬಳಸಲಾಗಿದೆ ಎನ್ನಲಾದ ಬೈಕ್ ಅನ್ನು ಹುಬ್ಬಳ್ಳಿಯ ಮಾವನೂರಿನಿಂದ ಕಳ್ಳತನ ಮಾಡಿದ್ದರು ಎಂದು ತನಿಖೆಯಲ್ಲಿ ತಿಳಿದು ಬಂದಿದೆ" ಎಂದು ಗ್ರಾಮೀಣ ಠಾಣೆ ಸಿಪಿಐ ರಮೇಶ ಹೇಳಿದ್ದಾರೆ.
2015ರ ಆಗಸ್ಟ್ 30ರಂದು ಹಿರಿಯ ಸಂಶೋಧಕ ಎಂ.ಎಂ.ಕಲಬುರ್ಗಿ ಅವರ ಹತ್ಯೆ ನಡೆದಿತ್ತು. ಧಾರವಾಡದ ಕಲ್ಯಾಣ ನಗರದಲ್ಲಿರುವ ಅವರ ಮನೆಗೆ ಆಗಮಿಸಿದ್ದ ದುಷ್ಕರ್ಮಿಗಳು ಗುಂಡು ಹಾರಿಸಿ ಹತ್ಯೆ ಮಾಡಿದ್ದರು.