ಮೈಸೂರು, ಡಿ. 01 (DaijiworldNews/HR): ಯಡಿಯೂರಪ್ಪ ಅವರು ವಿಧಾನ ಪರಿಷತ್ ಚುನಾವಣೆಯಲ್ಲಿ ಬೆಂಬಲ ನೀಡುವಂತೆ ಎಚ್.ಡಿ.ಕುಮಾರಸ್ವಾಮಿ ಅವರಲ್ಲಿ ಕೇಳಿಕೊಂಡಿದ್ದಾರೆ. ಇದು ಯಾವ ಅಕ್ರಮ ಸಂಬಂಧವೂ ಅಲ್ಲ, ಒಳಒಪ್ಪಂದವೂ ಅಲ್ಲ" ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, "ಎಲ್ಲಿ ಜೆಡಿಎಸ್ ಸ್ಪರ್ಧಿಸಿಲ್ಲವೋ ಅಲ್ಲಿ ಬಿಜೆಪಿಗೆ ಬೆಂಬಲ ನೀಡುವಂತೆ ಬಹಿರಂಗವಾಗಿಯೇ ಸಹಕಾರ ಕೋರಿದ್ದಾರೆ' ಎಂದರು.
ಇನ್ನು "ಈ ಹಿಂದೆ ಬಿಜೆಪಿಯನ್ನು ಬ್ರಾಹ್ಮಣರ ಪಕ್ಷವೆಂದು ಕರೆಯುತ್ತಿದ್ದರು. ಈಗ ದಲಿತರು, ಹಿಂದುಳಿದವರು ಬಿಜೆಪಿ ಜೊತೆ ಗುರುತಿಸಿಕೊಂಡು ಕಾಂಗ್ರೆಸ್ ಪಕ್ಷವನ್ನು ದೂರವಿಡುತ್ತಿದ್ದಾರೆ. ಹೀಗಾಗಿ, ಎಲ್ಲಾ ಚುನಾವಣೆಗಳಲ್ಲಿ ನಾವು ಗೆಲ್ಲುತ್ತಿದ್ದೇವೆ" ಎಂದು ಹೇಳಿದ್ದಾರೆ.